ಸಿದ್ದರಾಮಯ್ಯ ಸರ್ಕಾರ ಬಡವರ, ದಲಿತರ ಪಾಲಿಗೆ ದುಸ್ವಪ್ನವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರ ಅಭಿವೃದ್ಧಿಗಾಗಿ ಮೀಸಲಿರಿಸಲಾಗಿದ್ದ ಅನುದಾನವನ್ನು ಕಾಂಗ್ರೆಸ್ ಸರ್ಕಾರ ಬೇರೆ ಉದ್ದೇಶಗಳಿಗೆ ಬಳಸುವ ಮೂಲಕ ದಲಿತರಿಗೆ ಅನ್ಯಾಯ ಎಸಗುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದಲೂ ಪ್ರತಿನಿತ್ಯ ಜನವಿರೋಧಿ ನಿಲುವನ್ನೇ ತೆಗೆದುಕೊಂಡು, ಬೆಲೆ ಏರಿಕೆಯ ಮೂಲಕ ಜನಸಾಮಾನ್ಯರ ಬದುಕನ್ನು ಕಷ್ಟಮಯವಾಗಿಸಿದೆ. ಜನರ ಮೇಲೆ ತೆರಿಗೆ ಹಾಕಿ ಲೂಟಿ ಹೊಡೆಯುತ್ತಿದೆ ಕಾಂಗ್ರೆಸ್ ಸರ್ಕಾರ.
24% ಜನರಿರುವ ಪರಿಶಿಷ್ಟ ವರ್ಗಕ್ಕೆ ಗುತ್ತಿಗೆಯಲ್ಲಿ 1% ಮೀಸಲಾತಿಯೂ ಇಲ್ಲ ಆದರೆ ಮುಸ್ಲಿಮರಿಗೆ 4% ಮೀಸಲಾತಿ ನೀಡುವ ಮೂಲಕ ತುಷ್ಟಿಕರಣ ರಾಜಕಾರಣವನ್ನು ಮುಂದುವರಿಸಿದೆ. ಸರ್ಕಾರದ ಈ ತಾರತಮ್ಯ ನೀತಿ, ಭ್ರಷ್ಟಾಚಾರ, ಬೆಲೆ ಏರಿಕೆ ಖಂಡಿಸಿ ಬಿಜೆಪಿ ಏಪ್ರಿಲ್ 7 ರಿಂದ ಮೇ 3 ರ ತನಕ ರಾಜ್ಯಾದ್ಯಂತ ನಾಲ್ಕು ಹಂತಗಳಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದ್ದು ಈಗಾಗಲೇ ಮೈಸೂರಿನಿಂದ ಜನಾಕ್ರೋಶ ಯಾತ್ರೆಯನ್ನು ಪ್ರಾರಂಭಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಈ ಯಾತ್ರೆ ತಲುಪಲಿದ್ದು, ಉಡುಪಿ ಜಿಲ್ಲೆಯಲ್ಲಿ ನಾಳೆ ಏಪ್ರಿಲ್ 10ರಂದು ಬೃಹತ್ ಜನಾಕ್ರೋಶ ಸಭೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಕಾರ್ಕಳ ವಿಧಾನ ಸಭಾ ಕ್ಷೇತ್ರದಾದ್ಯಂತ ಬಿಜೆಪಿಯು ಶಾಸಕ ವಿ ಸುನಿಲ್ ಕುಮಾರ್ ನೇತೃತ್ವದಲ್ಲಿ, ಕಾರ್ಕಳ ಬಿಜೆಪಿ ಮಂಡಲಾಧ್ಯಕ್ಷ ನವೀನ್ ನಾಯಕ ಉಪಸ್ಥಿತಿಯಲ್ಲಿ ನಿರಂತರ ಸಭೆಗಳನ್ನು ನಡೆಸಲಾಗುತ್ತಿದೆ. ಕಾರ್ಕಳ ಕ್ಷೇತ್ರದಿಂದ ಕಾರ್ಯಕರ್ತರು ಭಾಗಿಯಾಗಲಿದ್ದು ಮರ್ಣೆ, ಬೈಲೂರು ಹಾಗೂ ಮಿಯಾರು ಮಹಾ ಶಕ್ತಿಕೇಂದ್ರಗಳಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಲಾಯಿತು. ಗ್ರಾಮ ಶಹ ಸಭೆಗಳನ್ನು ನಡೆಸಲಾಗುತ್ತಿದೆ.