ಪಡುಬಿದ್ರಿಯಲ್ಲಿ ತಾಯಿ–ಮಗು ಆರೋಗ್ಯ ಜಾಗೃತಿ ಕಾರ್ಯಕ್ರಮ : ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ

0
10

ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ, ಇನ್ನರ್ ವೀಲ್ ಕ್ಲಬ್ ಪಡುಬಿದ್ರಿ ಹಾಗೂ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ.) ಇವರ ಸಂಯುಕ್ತ ಆಶ್ರಯದಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯ ಆರೈಕೆ ಕುರಿತು ಜಾಗೃತಿ ಕಾರ್ಯಕ್ರಮ ಹಾಗೂ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ಅಕ್ಟೋಬರ್ 10ರಂದು ಬೆಳಿಗ್ಗೆ 9 ಗಂಟೆಗೆ ಪಡುಬಿದ್ರಿಯ ಸಹಕಾರಿ ಸಂಗಮದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜಶ್ರೀ ಕಿಣಿ ಉದ್ಘಾಟಿಸಲಿದ್ದು, ರೋಟರಿ ಕ್ಲಬ್ ಪಡುಬಿದ್ರಿ ಅಧ್ಯಕ್ಷ ರೋ. MPHF ವೈ. ಸುಧೀರ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ರೋಟರಿ ವಲಯ–5ರ ಸಹಾಯಕ ಗವರ್ನರ್ ರೋ. ಸುರೇಶ್ ನಾಯಕ್ ಬಿ., ಕೆನರಾ ಬ್ಯಾಂಕ್ ಬ್ರಹ್ಮಗಿರಿ ಶಾಖೆಯ ಪ್ರಬಂಧಕಿ ರೋ. ಸೌಮ್ಯ ಸುವರ್ಣ, ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿವೃತ್ತ ಪ್ರಬಂಧಕ ಪ್ರಬೋಧ ಚಂದ್ರ ಹೆಜಮಾಡಿ, ಕಾಪು ತಾಲೂಕು ಭೂನ್ಯಾಯ ಮಂಡಳಿ ಸದಸ್ಯ ರೋ. ರಮೀಜ್ ಹುಸೇನ್, ರೋಟರಿ ಜಿಲ್ಲಾ 3182ರ ತಾಯಿ ಮತ್ತು ಮಕ್ಕಳ ಆರೋಗ್ಯ ವಿಭಾಗದ ಜಿಲ್ಲಾ ಉಪಾಧ್ಯಕ್ಷ ರೋ. ಸಂತೋಷ್ ಪಡುಬಿದ್ರಿ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.

ಇನ್ನರ್ ವೀಲ್ ಕ್ಲಬ್ ಪಡುಬಿದ್ರಿ ಅಧ್ಯಕ್ಷೆ ಶುಭ ದಿನೇಶ್, ಪೂರ್ಣ ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯ ಯಶೋಧ ಪಡುಬಿದ್ರಿ ಹಾಗೂ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಉಪಾಧ್ಯಕ್ಷ ಗುರುರಾಜ್ ಪೂಜಾರಿ ಉಪಸ್ಥಿತರಿರುವರು.

ತಾಯಿ ಮತ್ತು ಮಗುವಿನ ಆರೋಗ್ಯದ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಗರ್ಭಿಣಿಯರಿಗೆ ಅಗತ್ಯ ಪೌಷ್ಟಿಕ ಆಹಾರ ಕಿಟ್‌ಗಳನ್ನು ವಿತರಿಸುವ ಮೂಲಕ ಆರೋಗ್ಯಕರ ತಾಯ್ತನ ಹಾಗೂ ಶಿಶುಪಾಲನೆಗೆ ಉತ್ತೇಜನ ನೀಡುವ ಉದ್ದೇಶವನ್ನು ಕಾರ್ಯಕ್ರಮ ಹೊಂದಿದೆ. ರೋಟರಿ ಕ್ಲಬ್ ಪಡುಬಿದ್ರಿಯ ಕಾರ್ಯದರ್ಶಿ ರೋ. ಕಾರ್ತಿಕ್ ಮಟ್ಟು ಹಾಗೂ ಇನ್ನರ್ ವೀಲ್ ಕ್ಲಬ್ ಪಡುಬಿದ್ರಿಯ ಕಾರ್ಯದರ್ಶಿ ಆರತಿ ಹರಿಪ್ರಸಾದ್ ಸೇರಿದಂತೆ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಲಿದ್ದಾರೆ.