ಚಿಂತನೆ ಹಾಗೂ ದೂರದೃಷ್ಟಿಯ ಪಕ್ವತೆ ಸ್ವ ಉದ್ಯೋಗದ ಮೆಟ್ಟಿಲು:ಡಾ. ಉದಯ್ ಶೆಟ್ಟಿ

0
14

ಬ್ರಹ್ಮಾವರಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್ಸಂಸ್ಥೆಬ್ರಹ್ಮಾವರ ಇವರ ಆಶ್ರಯದಲ್ಲಿ ಅಣಬೆ ಬೇಸಾಯ ಮತ್ತು ಬ್ಯೂಟಿ ಪಾರ್ಲರ್ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು  ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜಿಲ್ಲಾ ಪಂಚಾಯತ್ ಉಡುಪಿ ಯೋಜನಾ ನಿರ್ದೇಶಕರಾದ ಡಾಉದಯ್ ಶೆಟ್ಟಿ ಅವರು ಮಾತನಾಡಿ, ಗ್ರಾಮೀಣ ಯುವಜನತೆಗೆ ಸ್ವ ಉದ್ಯೋಗ ಆರಂಭಿಸಲು ರುಡ್ ಸೆಟ್ ಸಂಸ್ಥೆ ಮಹತ್ವದ ವೇದಿಕೆಯನ್ನು ಒದಗಿಸುತ್ತಿದೆ ಎಂದರು. ಉಚಿತ ತರಬೇತಿ, ಊಟ ಮತ್ತು ವಸತಿಯೊಂದಿಗೆ ಯುವಕರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿಸಲು ಸಂಸ್ಥೆ ಶ್ರಮಿಸುತ್ತಿದೆ ಎಂದು ತಿಳಿಸಿದರು.

“ಚಿಂತನೆ ಮತ್ತು ದೂರದೃಷ್ಟಿಯ ಪಕ್ವತೆ ಇದ್ದರೆ ಯಾವುದೇ ವ್ಯವಹಾರದಲ್ಲಿ ಯಶಸ್ಸು ಸಾಧಿಸಬಹುದು. ಹೊಸತನದ ಆಲೋಚನೆಗಳು ನಮ್ಮನ್ನು ಯಶಸ್ಸಿನ ಶಿಖರಕ್ಕೆ ಕೊಂಡೊಯ್ಯುತ್ತವೆ” ಎಂದು ಅವರು ಅಭಿಪ್ರಾಯಪಟ್ಟರು. ಬಳಿಕ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಇನ್ನೋರ್ವ ಮುಖ್ಯ ಅತಿಥಿಯಾದ ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಉಡುಪಿ ಶ್ರೀ ಹರೀಶ್ ಜಿ ಅವರು ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು. ತರಬೇತಿ ನಂತರ ಬ್ಯಾಂಕಿನ ಮೂಲಕ ಹಣಕಾಸಿನ ನೆರವು ಪಡೆದು ಸ್ವ ಉದ್ಯೋಗ ಆರಂಭಿಸಬೇಕು ಎಂದು ಸಲಹೆ ನೀಡಿದರು. ಬ್ಯಾಂಕಿಂಗ್ ಸಂಬಂಧಿತ ಸಮಸ್ಯೆಗಳು ಎದುರಾದಲ್ಲಿ ತಮ್ಮ ಗಮನಕ್ಕೆ ತಂದು ಪರಿಹರಿಸಿಕೊಳ್ಳಬಹುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಡಾಬೊಮ್ಮಯ್ಯ ಎಂ. ಅವರು, ತರಬೇತಿಯನ್ನು ಶ್ರದ್ಧೆಯಿಂದ ಪಡೆದುಕೊಂಡು, ಸಂಸ್ಥೆಯ ಸೌಲಭ್ಯಗಳನ್ನು ಇತರರಿಗೂ ಹಂಚಿಕೊಳ್ಳುವ ಮೂಲಕ ದೇಶದ ಆರ್ಥಿಕ ಅಭಿವೃದ್ಧಿಗೆ ಕೈಜೋಡಿಸೋಣ ಎಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮವನ್ನು ಉಪನ್ಯಾಸಕಿ ಶ್ರೀಮತಿ ಚೈತ್ರ ಕೆ. ನಿರೂಪಿಸಿದರು. ಹಿರಿಯ ಉಪನ್ಯಾಸಕರಾದ ಸಂತೋಷ್ ಶೆಟ್ಟಿ ಸ್ವಾಗತಿಸಿದರು. ಹಿರಿಯ ಕಚೇರಿ ಸಹಾಯಕ ಶ್ರೀ ರವಿ ವಂದಿಸಿದರು.

LEAVE A REPLY

Please enter your comment!
Please enter your name here