Sunday, March 23, 2025
Homeರಾಜ್ಯಮೇ 19 : ಒಂದೇ ದಿನ ವಿವಿಧ ಜಿಲ್ಲೆಯಲ್ಲಿ ಐದು ಶವಗಳು ಪತ್ತೆ

ಮೇ 19 : ಒಂದೇ ದಿನ ವಿವಿಧ ಜಿಲ್ಲೆಯಲ್ಲಿ ಐದು ಶವಗಳು ಪತ್ತೆ

ಬೆಂಗಳೂರು : ಕಳೆದ ಒಂದು ತಿಂಗಳ ಒಳಗೆ ನಡೆದ ಮೂರು ಜನ ಹೆಣ್ಣುಮಕ್ಕಳ ಕೊಲೆ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆ ಉದ್ಭವಿಸುವಂತೆ ಮಾಡಿವೆ. ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ, ರವಿವಾರ ಒಂದೇ ದಿನ ವಿವಿಧ ಜಿಲ್ಲೆಯಲ್ಲಿ ಬೆಂಗಳೂರು, ಮೈಸೂರು, ಬಾಗಲಕೋಟೆ, ಉಡುಪಿ ಜಿಲ್ಲೆಗಳಲ್ಲಿ ಐದು ಶವಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಇಂದು (ಮೇ 19) ಶವ ಪತ್ತೆಯಾಗಿದೆ.

ಬೆಂಗಳೂರಿನ ಸಿಟಿ ಮಾರ್ಕೆಟ್ ಕಾಂಪ್ಲೆಕ್ಸ್ ಹಿಂಭಾಗದಲ್ಲಿ 35 ವರ್ಷ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತುಹಾಕಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಜಯನಗರದ ಹೂವಿನಹಡಗಲಿ ತಾಲೂಕಿನ ಕುರುವತ್ತಿ ಗ್ರಾಮ ಬಳಿಯ ತುಂಗಭದ್ರಾ ನದಿಯಲ್ಲಿ 43 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಹಿರೇಹಡಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೈಸೂರು ನಗರದ ಹೊರವಲಯದ ಸಿಗ್ನಲ್ ಬಳಿಯ ಮೋರಿಯಲ್ಲಿ ಪತ್ತೆ ಅಂಗಾತ ಮಲಗಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular