ದೇಗುಲಗಳ ಪುನರ್ ಪ್ರತಿಷ್ಠೆಯಂತ ಕಾರ್ಯಗಳು ಹಿಂಧೂ ಸಮಾಜದ ಒಗ್ಗಟ್ಟಿಗೆ ಪೂರಕವಾಗಲಿ. ಎಡನೀರು ಶ್ರೀಗಳು

0
13

ಅಣಂಗೂರು ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ 2027ರ ಫೆಬ್ರವರಿಯಲ್ಲಿ ನಡೆಯಲಿರುವ ಶ್ರೀ ದೇವಿಯ ರಜತ ಫಲಕದ ಪುನಃ ಪ್ರತಿಷ್ಠೆ, ಶ್ರೀ ನಾಗನ ಕಟ್ಟೆಯ ಪುನರ್ ನಿರ್ಮಾಣ ಹಾಗೂ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ನಿಧಿ ಸಂಗ್ರಹಕ್ಕಾಗಿ ರೂಪಿಸಲಾಗಿರುವ ‘ಶ್ರೀ ಶಾರದಾ ನಿಧಿ’ ಲಕ್ಕಿ ಕೂಪನ್ ಅನ್ನು ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಮಹೋತ್ಸವ ಸಮಿತಿಯ ರಕ್ಷಾಧಿಕಾರಿ ಹಾಗೂ ಕೊಡುಗೈ ದಾನಿ ವಸಂತ ಪೈ ಬದಿಯಡ್ಕ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ವೇದಿಕೆಯಲ್ಲಿ ಡಾ. ವಾಮನ್ ರಾವ್ ಬೇಕಲ್ ಹಾಗೂ ಉದ್ಯಮಿ ರಾಮಚಂದ್ರ ಕಾಮತ್ ಉಪಸ್ಥಿತರಿದ್ದರು.

ಮಂದಿರದ ಆಡಳಿತ ಸಮಿತಿಯ ಅಧ್ಯಕ್ಷ ದಿನೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹೋತ್ಸವವನ್ನು ಭಕ್ತರ ಸಹಕಾರದಿಂದ ಅತ್ಯಂತ ವಿಜೃಂಭಣೆಯಿಂದ ನಡೆಸುವ ಸಂಕಲ್ಪ ವ್ಯಕ್ತಪಡಿಸಿದರು. ಧನಸಂಗ್ರಹದ ಉದ್ದೇಶದಿಂದ ಬಿಡುಗಡೆ ಮಾಡಿರುವ ‘ಶ್ರೀ ಶಾರದಾ ನಿಧಿ’ ಲಕ್ಕಿ ಕೂಪನ್‌ಗೆ ಭಕ್ತರು ಹಾಗೂ ದಾನಿಗಳು ಉದಾರವಾಗಿ ಸಹಕರಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ವೆಂಕಟೇಶ್ ಸ್ವಾಗತಿಸಿದರು. ಕಿರಣ್ ಟಿ. ಕಾರ್ಯಕ್ರಮ ನಿರೂಪಿಸಿದರು. ಸುನಿಲ್ ಶೆಟ್ಟಿ ವಂದನಾರ್ಪಣೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಭಜನಾ ಮಂದಿರದ ಪದಾಧಿಕಾರಿಗಳು, ಭಕ್ತಾದಿಗಳು, ದಾನಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು, ಮಹೋತ್ಸವದ ಯಶಸ್ಸಿಗೆ ಎಲ್ಲರೂ ಕೈಜೋಡಿಸುವ ಸಂಕಲ್ಪ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here