ದಾವಣಗೆರೆ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯಾಗಿ ದಿನಾಂಕ 26-05-2024ನೇ ಭಾನುವಾರ ಸಂಜೆ 5 ಗಂಟೆಗೆ ಸಂಸ್ಥೆಯ ಕಲಾಕುಂಚ ಕಛೇರಿಯ ಸಭಾಂಗಣದಲ್ಲಿ ಮಹಾಸಭೆಯನ್ನು ಕರೆಯಲಾಗಿದೆ ಎಂದು ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ಶೆಣೈ ತಿಳಿಸಿದ್ದಾರೆ. ಕಲಾಕುಂಚ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ
ಗಣೇಶ್ ಶೆಣೈಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಮಹತ್ವಪೂರ್ಣ ಸಭೆಗೆ ಕಲಾಕುಂಚ ಸರ್ವ ಸದಸ್ಯರು, ವಿವಿಧ ಬಡಾವಣೆ ಶಾಖೆಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭೆಯನ್ನು
ಯಶಸ್ವಿಗೊಳಿಸಬೇಕಾಗಿ ಸಂಸ್ಥೆಯ ಹಾಲಿ ಪ್ರಧಾನ ಕಾರ್ಯದರ್ಶಿ ಶೈಲಾ ವಿಜಯಕುಮಾರ್ ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9538732777, 9513189196 ಈ ಸನೀಹವಾಣಿಗಳಿಗೆ ಸಂಪರ್ಕಿಸಬಹುದು.