ಆರ್​ ಎಸ್​ ಎಸ್​ ನ ಸೇವಾ ಕಾರ್ಯದಿಂದ ರಾಷ್ಟ್ರ ಬೆಳಗಲಿ

0
1


ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್​ ಎಸ್​ ಎಸ್​) ದೇಶಸೇವೆಯ ಕಾರ್ಯದಲ್ಲಿ ಶತಮಾನ ಕಂಡಿರುವುದು ಸಂತಸ ತಂದಿದೆ. ಹಿಂದುತ್ವದ ರಕ್ಷಣೆಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಆರ್​ ಎಸ್​ ಎಸ್​ ನಿಸ್ವಾರ್ಥ ಸೇವೆಯಿಂದ ವಿಶ್ವದಲ್ಲಿ ಭಾರತ ಇನ್ನಷ್ಟು ಬೆಳಗಲಿ ಎಂದು ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾರೈಸಿದರು.
ಕೃಷ್ಣಮಠಕ್ಕೆ ಬುಧವಾರ ಭೇಟಿ ನೀಡಿದ ಆರ್​ ಎಸ್​ ಎಸ್​ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅನುಗ್ರಹ ಮಂತ್ರಾಕ್ಷತೆ ನೀಡಿ ಶ್ರೀಗಳು ಆಶೀರ್ವಚನ ನೀಡಿದರು.
ಸಾಧನೆಯ ಮಾರ್ಗದಲ್ಲಿ ಸಾಗುತ್ತಿರುವಾಗ ಟೀಕೆ-ಟಿಪ್ಪಣಿಗಳು ಎದುರಾಗುವುದು ಸಹಜ. ಆರ್​ ಎಸ್​ ಎಸ್​ ಧ್ಯೇಯೋದ್ದೇಶ ಎಂದಿಗೂ ಸಕಾರಾತ್ಮಕವಾಗಿಯೇ ಇದೆ. ಪ್ರಕೃತಿ ವಿಕೋಪದಂತಹ ಸಂದರ್ಭಗಳಲ್ಲಿ ಯಾವುದೇ ಪ್ರಚಾರ ಬಯಸದೆ, ಫಲಾಪೇಕ್ಷೆ ಇಲ್ಲದೆ ನೊಂದವರ ಸೇವೆ ಮಾಡುವುದನ್ನು ಕಂಡಿದ್ದೇವೆ. ಆರ್​ ಎಸ್​ ಎಸ್​ ಮೂಲಕ ಎಲ್ಲ ಕುಟುಂಬಗಳಲ್ಲೂ ಸಂಸ್ಕಾರ ವೃದ್ಧಿಸಲಿ. ತನ್ಮೂಲಕ ರಾಷ್ಟ್ರೀಯ ಹಿತಾಸಕ್ತಿ ಜಾಗೃತವಾಗಲಿ ಎಂದು ಶ್ರೀಗಳು ಹಾರೈಸಿದರು.
ಕಿರಿಯ ಯತಿ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಗೌರವಿಸಿದರು. ಆರ್​ ಎಸ್​ ಎಸ್​ ನಗರ ಚಾಲಕ್​ ಮಟ್ಟು ಲಕ್ಷಿ$್ಮನಾರಾಯಣ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪುತ್ತಿಗೆ ಶ್ರೀಗಳಿಂದ ಹೊಸಬಾಳೆ ಅವರು ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿದರು.
ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ, ಮಠದ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ  ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here