ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧ ಘರ್ಷಣೆ ಶಮನವಾಗಲಿ, ದೇಶ ದೇಶಗಳ ಮಧ್ಯೆ ಐಕ್ಯತೆ ಪ್ರಾಪ್ತಿಯಾಗಲಿ ಎಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
ವಿಶೇಷವಾಗಿ 18 ದೇಶಗಳಲ್ಲಿ ಇರುವ ಸಮಿತಿಯ ಪದಾಧಿಕಾರಿಗಳು ಮತ್ತು ಕಾಪುವಿನ ಅಮ್ಮನ ಭಕ್ತರ ಒಳಿತಿಗಾಗಿ ಪ್ರಾರ್ಥಿಸಲಾಯಿತು.
ದೇವಳದ ಪ್ರಧಾನ ತಂತ್ರಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿ, ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ, ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಅಭಿವೃದ್ಧಿ ಸಮಿತಿಯ ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ್ ಶೆಟ್ಟಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್. ಪಾಲನ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರ್, ಚರಿತ ದೇವಾಡಿಗ, ದೇವಿಪಾತ್ರಿ ಗುರುಮೂರ್ತಿ ಮತ್ತು ಸಚಿನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ವರದಿ ವಿನೋದ್ ಶೆಟ್ಟಿ ಉಡುಪಿ

