ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಸೋಮವಾರ ಧರ್ಮಸ್ಥಳದ ಗದ್ದೆಯಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ ನೀಡಲಾಯಿತು.
ಯಾಂತ್ರೀಕೃತ ಕೃಷಿಯಿಂದ ರೈತರು ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಮತ್ತು ಲಾಭ ಪಡೆಯುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಹೇಳಿ ಹೆಗ್ಗಡೆಯವರು ಶುಭ ಹಾರೈಸಿದರು.
ಯಂತ್ರಶ್ರೀ ಯೋಜನೆಯಲ್ಲಿ ರಾಜ್ಯದ ೯೬ ತಾಲ್ಲೂಕುಗಳಲ್ಲಿ ೪೪,೧೧೯ ರೈತರನ್ನು ಪ್ರೇರೆಪಿಸಿ ೧,೦೦,೨೫೪ ಎಕ್ರೆ ಕೃಷಿ ಭೂಮಿಯನ್ನು ಈಗಾಗಲೆ ಹದಗೊಳಿಸಲಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿವಾಹಕ ನಿರ್ದೇಶಕ ಅನಿಲ್ ಕುಮಾರ್ ತಿಳಿಸಿದ್ದಾರೆ.