ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ತುಳು ಮಹಾಸಭೆ, ಮಂಗಳೂರು ಇವರ ಸಹಯೋಗದಲ್ಲಿ ವೈದ್ಯಕೀಯ ಶಿಬಿರ

0
89

ಕಾಟುಕುಕ್ಕೆಯ ಶ್ರೀ ಸುಬ್ರಹ್ಮಣ್ಯೇಶ್ವರ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ “ಕುಂಬಳೆ ಗಾಂಧಿ” ಎಂದೇ ಖ್ಯಾತರಾದ ಬಿ. ದೇವಪ್ಪ ಆಳುವರವರ ಸ್ಮರಣಾರ್ಥವಾಗಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ತುಳು ಮಹಾಸಭೆ, ಮಂಗಳೂರು ಇವರ ಸಹಯೋಗದಲ್ಲಿ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಯಿತು.

ಈ ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ಶಿಬಿರ, ಹೃದಯರೋಗ ತಪಾಸಣಾ ಶಿಬಿರ, ನೇತ್ರ ತಪಾಸಣಾ ಶಿಬಿರ ಹಾಗೂ ನೇತ್ರದಾನ ಜಾಗೃತಿ ಕಾರ್ಯಕ್ರಮಗಳನ್ನು ಒಳಗೊಂಡಿತ್ತು.

ಈ ಕಾರ್ಯಕ್ರವನ್ನು ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪ್ರೌಢಶಾಲೆ, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ತುಳು ಮಹಾಸಭೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದು, ದೇರಳಕಟ್ಟೆಯ ಜಸ್ಟಿಸ್ ಕೆ. ಎಸ್. ಹೆಗ್ಡೆ ಧಾರ್ಮಿಕ ಆಸ್ಪತ್ರೆಯ ವೈದ್ಯರ ತಂಡದಿಂದ ಶಿಬಿರವನ್ನು ನಡೆಸಲಾಯಿತು.

ಈ ಶಿಬಿರದಲ್ಲಿ ಒಟ್ಟು 130 ಮಂದಿ ನೇತ್ರ ತಪಾಸಣೆಯಿಂದ, 120 ಮಂದಿ ಸಾಮಾನ್ಯ ಆರೋಗ್ಯ ತಪಾಸಣೆಯಿಂದ ಹಾಗೂ 70 ಮಂದಿ ಹೃದಯ ತಪಾಸಣೆಯಿಂದ ಪ್ರಯೋಜನ ಪಡೆದರು.

ಕಾರ್ಯಕ್ರಮವನ್ನು ಕೇರಳ ರಾಜ್ಯದ ಮಾಜಿ ಪ್ರತಿಪಕ್ಷ ನಾಯಕ, ಮಾಜಿ ಸಂಸದ ಹಾಗೂ ಮಾಜಿ ಸಚಿವರಾದ ಶ್ರೀ ರಮೇಶ್ ಚೆನ್ನಿತಳ ಅವರು ಉದ್ಘಾಟಿಸಿದರು.

LEAVE A REPLY

Please enter your comment!
Please enter your name here