ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪೋಷಕರ ಸಭೆ

0
21

ವಿವೇಕಾನಂದ ಪದವಿ ಪೂರ್ವಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.ಸಭೆಯಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪ್ರಸ್ತುತ ಶೈಕ್ಷಣಿಕ ಪ್ರಗತಿ, ತರಗತಿಯಲ್ಲಿನಕಲಿಕೆಯ ಸ್ಥಿತಿ, ವಿಷಯವಾರು ಸಾಧನೆ ಹಾಗೂ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಪಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವರಿಸಲಾಯಿತು. ವಿದ್ಯಾರ್ಥಿಗಳು ನಿಯಮಿತವಾಗಿ ತರಗತಿಗಳಿಗೆ ಹಾಜರಾಗುವುದು, ಪ್ರತಿದಿನದ ಪಾಠವನ್ನುಅಂದೇ ಪುನರಾವರ್ತಿಸುವುದು, ಸಂದೇಹಗಳನ್ನು ಶಿಕ್ಷಕರಲ್ಲಿ ಕೇಳಿ ಪರಿಹರಿಸಿಕೊಳ್ಳುವುದು ಹಾಗೂ ಪರೀಕ್ಷೆಗಳಿಗೆ ವ್ಯವಸ್ಥಿತವಾಗಿ ಸಿದ್ಧತೆ ನಡೆಸುವುದುಅಗತ್ಯವೆಂದು ತಿಳಿಸಲಾಯಿತು.

ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯ ಜೊತೆಗೆಅವರ ವ್ಯಕ್ತಿತ್ವ ವಿಕಸನ, ಸಮಯಪಾಲನೆ, ಶಿಸ್ತು, ಜವಾಬ್ದಾರಿಯುತ ನಡವಳಿಕೆ ಮತ್ತುಉತ್ತಮ ಅಭ್ಯಾಸಗಳ ಬಗ್ಗೆಯೂ ಪೋಷಕರಿಗೆ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳ ಅಧ್ಯಯನದ ಮೇಲೆ ನಿರಂತರ ನಿಗಾ ವಹಿಸುವುದರಜೊತೆಗೆ, ಅವರಲ್ಲಿ ಆತ್ಮವಿಶ್ವಾಸ ಹಾಗೂ ಕಲಿಕೆಯ ಆಸಕ್ತಿಯನ್ನು ಬೆಳೆಸುವಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಲಾಯಿತು.

ಸಭೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್‌ ರೈ ಎಂ, ಉಪನ್ಯಾಸಕ ವೃಂದವರು ಹಾಗೂ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಪಾಲ್ಗೊಂಡಿದ್ದರು.