Saturday, June 14, 2025
Homeಪುತ್ತೂರುಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿಜಿಸ್ಟರ್ ವಿಟ್ಲ ಇದರ ಜನಜಾಗೃತಿ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿಜಿಸ್ಟರ್ ವಿಟ್ಲ ಇದರ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಮತ್ತು ನವಜೀವನ ಸಮಿತಿಯ ಪೋಷಕರ ಸಭೆ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ.) ವಿಟ್ಲ ಇದರ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಮತ್ತು ನವಜೀವನ ಸಮಿತಿಯ ಪೋಷಕರ ಸಭೆ ವಿಟ್ಲ ವಲಯದ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳರ ಅಧ್ಯಕ್ಷತೆಯಲ್ಲಿ ವಿಟ್ಲ ಯೋಜನಾ ಕಚೇರಿಯಲ್ಲಿ ಜರಗಿತು

ಸಭೆಯಲ್ಲಿ ಮಂಚಿ ವಲಯದಲ್ಲಿ ನಡೆಯುವ ಮಧ್ಯವರ್ಜನ ಶಿಬಿರದ ಬಗ್ಗೆ,ಮತ್ತು 2025 – 26ನೇ ಸಾಲಿನ ಜನ ಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಪ್ರಸ್ತುತ ವರ್ಷದಲ್ಲಿ ಎರಡು ತಂಬಾಕು ದಿನಾಚರಣೆ ಕಾರ್ಯಕ್ರಮ ಎರಡು ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ ಒಂದು ಮಧ್ಯವರ್ಜನ ಶಿಬಿರ ಕಾರ್ಯಕ್ರಮ, 15 ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ, ಗಾಂಧಿ ಜಯಂತಿ ಕಾರ್ಯಕ್ರಮ, ನವ ಜೀವನೋತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಸುರೇಶ್ ಗೌಡ ಪ್ರಾಥಮಿಕವಾಗಿ ಮಾತನಾಡಿದರು. ಹಾಗೂ ಪ್ರಾದೇಶಿಕ ಕಚೇರಿಯ ಜನ ಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ್ ಆಚಾರ್ಯರವರು ಜನಜಾಗೃತಿ ಕಾರ್ಯಕ್ರಮಗಳ ಬಗ್ಗೆ ವಿವರಿಸಿದ್ದರು.

ದಿನಾಂಕ 14- 6-2025 ರಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮೋತಿಮಾರು ಇಲ್ಲಿ ನಡೆಯುವ ಮಧ್ಯವ ಜನರ ಶಿಬಿರದ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಅಳಿಕೆ ವಲಯದ ಜಾಗೃತಿ ಅಧ್ಯಕ್ಷರಾದ ಬಾಲಕೃಷ್ಣ ಕಾರಂತ, ಕೇಪು ವಲಯ ಅಧ್ಯಕ್ಷರಾದ ರಾಧಾಕೃಷ್ಣ ಚೇಲಡ್ಕ, ಕಲ್ಲಡ್ಕ ವಲಯದ ಅಧ್ಯಕ್ಷರಾದ ಬಟ್ಯ ಪ್ಪ ಶೆಟ್ಟಿ, ಪೆರ್ನೆ ವಲಯ ಅಧ್ಯಕ್ಷರಾದ ರೋಹಿತಾಕ್ಷ, ಮಾಣಿ ವಲಯದ ಅಧ್ಯಕ್ಷರಾದ ರಾಜಾರಾಮ್ ಶೆಟ್ಟಿ, ಜನಜಾಗೃತಿ ವೇದಿಕೆಯ ಸದಸ್ಯರಾದ ನಟೇಶ್ ವಿಟ್ಲ ಉಪಸ್ಥಿತರಿದ್ದರು. ಕಚೇರಿ ಸಿಬ್ಬಂದಿ ಮಮತಾ ಸ್ವಾಗತಿಸಿ, ಕೇಪು ವಲಯದ ನವಜೀವನ ಸಮಿತಿಯ ಪೋಷಕರಾದ ಗಾಯತ್ರಿ  ವಂದಿಸಿದರು.

RELATED ARTICLES
- Advertisment -
Google search engine

Most Popular