ಉಡುಪಿ ನಗರ ಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಕುರಿತು ದಿ.03-02-2025 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಮಹಾ ನಗರ ಪಾಲಿಕೆ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತಗಳಲ್ಲಿ ಈ ಬಗ್ಗೆ ಇದರ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ಪಂಚಾಯತ್ ನಿರ್ಣಯ ಕೈಗೊಂಡು ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್, ಉಡುಪಿ ನಗರ ಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.