Thursday, September 12, 2024
Homeಉಜಿರೆಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ


ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಮನವಿಪತ್ರ ಬಿಡುಗಡೆಗೊಳಿಸಿದರ
ನಿವೃತ್ತ ನೌಕರರು ಸಮಾಜ ಸೇವೆಯಲ್ಲಿ ಪ್ರವೃತರಾಗಬೇಕು.
ಉಜಿರೆ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಲವು ವರ್ಷಗಳ ಕಾಲ ಅನುಪಮವಾಗಿ ಕರ್ತವ್ಯ ನಿರ್ವಹಿಸಿ, ನಿವೃತ್ತರಾದ ನೌಕರರು ಸರ್ಕಾರಕ್ಕೂ, ಸಮಾಜಕ್ಕೂ ಉತ್ತಮ ಸೇವೆ ನೀಡಿದ್ದು ಸ್ವಾಭಿಮಾನದೊಂದಿಗೆ ಸ್ವಾವಲಂಬಿ ಜೀವನ ನಡೆಸಬೇಕು. ತಮ್ಮ ಅನುಭವದ  ಪರಿಪಕ್ವತೆಯೊಂದಿಗೆ ನಿವೃತ್ತರು ಸಮಾಜಸೇವೆಯಲ್ಲಿ ಪ್ರವೃತ್ತರಾಗಬೇಕು ಎಂದು ಉಜಿರೆಯ ಎಸ್. ಡಿ. ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಹೇಳಿದರು.
ಅವರು ಮಂಗಳವಾರ ಉಜಿರೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕದ ಆಶ್ರಯದಲ್ಲಿ ಆಯೋಜಿಸಿದ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ ಉದ್ಘಾಟಿಸಿ, ಮನವಿಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.
ಪ್ರತಿಯೊಬ್ಬರ ಜೀವನದಲ್ಲಿಯೂ ನಿವೃತ್ತಿ ಒಂದು ಅನಿವಾರ್ಯ ಹಂತವಾಗಿದ್ದು ನಿವೃತ್ತರು ತಾಳ್ಮೆ ,ಪ್ರೀತಿ-ವಿಶ್ವಾಸ ಹಾಗೂ ಮಾನಸಿಕ ಪರಿಪಕ್ವತೆಯೊಂದಿಗೆ ಆರೋಗ್ಯಪೂರ್ಣ ಜೀವನ ನಡೆಸಬೇಕು. ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಿವೃತ್ತ ಪ್ರಾಂಶುಪಾಲರುಗಳಾದ ಪ್ರೊ ಟಿ. ಕೃಷ್ಣಮೂರ್ತಿ ಮತ್ತು ಪ್ರೊ. ಎ. ಜಯಕುಮಾರ್ ಶೆಟ್ಟಿ ಹಾಗೂ ವೇಣೂರಿನ ಶೀಲಾ ಎಸ್. ಹೆಗ್ಡೆ ಶುಭಾಶಂಸನೆೆ ಮಾಡಿದರು.
ಅಧ್ಯಕ್ಷತೆ ವಹಿಸಿದ ನಿವೃತ್ತÀ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲಶೆಟ್ಟಿ ಮಾತನಾಡಿ, ನಿವೃತ್ತರು ವೃದ್ಧರಲ್ಲ, ಪ್ರಬುದ್ದರು. ಕಿರಿಯರಿಗೆ ಸಕಾಲಿಕ ಮಾಹಿತಿ, ಮಾರ್ಗದರ್ಶನ ನೀಡಬೇಕು. ಪ್ರತಿಯೊಬ್ಬ ಸದಸ್ಯರೂ ಸಂಘಟನೆ ಬಗ್ಗೆ ಅಭಿಮಾನ ಮತ್ತು ಆಸಕ್ತಿಯಿಂದ ಸೇವೆ ಮಾಡಬೇಕು ಎಂದು ಹೇಳಿದರು.
ಎಲ್ಲಾ ವಿಭಾಗಸಂಘಟಕರು ಮತ್ತು ಹೊಸ ಸದಸ್ಯರನ್ನು ಗೌರವಿಸಲಾಯಿತು.
ಸನ್ಮತ್ ಕುಮಾರ್ ನಾರಾವಿ ಪ್ರಾಸ್ತ್ತಾವಿಕವಾಗಿ ಮಾತನಾಡಿದರು.
 ಬಿ ಸೋಮಶೇಖರ್ ಶೆಟ್ಟಿ ಸ್ವಾಗತಿಸಿದರು. ವಿಶ್ವಾಸ ರಾವ್ ಧನ್ಯವಾದವಿತ್ತರು. ವಸಂತ ರಾವ್ ನಾರಾವಿ ಕಾರ್ಯಕ್ರಮ ನಿರ್ವಹಿಸಿದರು.

ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ (ಬಾಕ್ಸ್ ಐಟಂ)
ಉಜಿರೆ : ಆರನೇ ತರಗತಿಯಿಂದ ೯ನೇ ತರಗತಿ ವರೆಗೆ ಕಲಿಯುತ್ತಿರುವ ಶಾಲಾ ವಿದ್ಯಾರ್ಥಿಗಳಲ್ಲಿ ಅಂಚೆ ಚೀಟಿ ಸಂಗ್ರಹಣೆ ಬಗ್ಗೆ ಆಸಕ್ತಿ ಮೂಡಿಸುವುದಕ್ಕಾಗಿ ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅಂಚೆ ಇಲಾಖೆ ಅರ್ಜಿಗಳನ್ನು ಆಹ್ವಾನಿಸಿದೆ ಎಂದು ಪುತ್ತೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕÀರು ತಿಳಿಸಿದ್ದಾರೆ.
ಅರ್ಜಿಯನ್ನು ಇದೆ ಸೆಪ್ಟೆಂಬರ್ ೩ರೊಳಗೆ ಹಿರಿಯ ಅಂಚೆ ಅಧೀಕ್ಷಕÀರು, ಪುತ್ತೂರು ವಿಭಾಗ, ಪುತ್ತೂರು
-೫೭೪ ೨೦೧ ಇವರಿಗೆ ತ್ವರಿತ ಅಂಚೆ ಅಥವಾ ನೋಂದಾಯಿತ ಅಂಚೆ ಮೂಲಕ ಕಳುಹಿಸಬೇಕು.
ಕಳೆದ ಬಾರಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ ೬೦ ಕ್ಕಿಂತ ಅಧಿಕ ಅಂಕಗಳನ್ನು ಪಡೆದವರು ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ ಕ್ಲಬ್ ಸದಸ್ಯರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಛೇರಿಯಿಂದ ಪಡೆಯಬಹುದು ಎಂದು ಅಂಚೆ ಇಲಾಖೆಯ ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular