ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿ ಸಬಲೀಕರಣಕ್ಕಾಗಿ ರಾಷ್ಟ್ರೀಯ ಷೇರು ಮಾರುಕಟ್ಟೆ (NSE) ಮತ್ತು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ನಡುವೆಒಪ್ಪಂದ (MOU)

0
8

​ರಾಷ್ಟ್ರೀಯ ಷೇರು ಮಾರುಕಟ್ಟೆ (NSE) ಮತ್ತು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಜಂಟಿಯಾಗಿ ‘ವಿದ್ಯಾರ್ಥಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ’ವನ್ನು (Student Skilling Program) ಆರಂಭಿಸಿವೆ. ಕರ್ನಾಟಕದ ಯುವಜನತೆಗೆ ಭದ್ರತಾ ಮಾರುಕಟ್ಟೆಗೆ (Securities Market) ಸಂಬಂಧಿಸಿದ ಉದ್ಯಮ-ಆಧಾರಿತ ಕೌಶಲ್ಯಗಳನ್ನು ಒದಗಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. 

​ಈ ತಿಳುವಳಿಕಾ ಒಪ್ಪಂದಕ್ಕೆ (MoU) ಮೇ 15, 2026 ರಂದು ಸಹಿ ಮಾಡಿ, ಪರಸ್ಪರ ವಿನಿಮಯ ಮಾಡಿಕೊಳ್ಳಲಾಯಿತು. ಕರ್ನಾಟಕ ಸರ್ಕಾರದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಸರ್ಕಾರದ ಇತರ ಗೌರವಾನ್ವಿತ ಸಚಿವರುಗಳ ಸಮ್ಮುಖದಲ್ಲಿ ಈ ಪ್ರಕ್ರಿಯೆ ನಡೆಯಿತು. ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳಾದ ಖುಷ್ಬೂ ಜಿ. ಚೌಧರಿ ಮತ್ತು NSE ಸಂಸ್ಥೆಯ ಚೀಫ್ ರೆಗ್ಯುಲೇಟರಿ ಆಫೀಸರ್ ಆದ ಅಂಕಿತ್ ಶರ್ಮಾ ಅವರು ಒಪ್ಪಂದಕ್ಕೆ ಸಹಿ ಹಾಕಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್, ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ಸಚಿವರಾದ ಪ್ರಿಯಾಂಕ್ ಎಂ. ಖರ್ಗೆ, ಕೃಷಿ ಸಚಿವರಾದ ಶ್ರೀ ಎನ್. ಚಲುವರಾಯಸ್ವಾಮಿ, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಹಾಗೂ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು. 

​NSE ಮತ್ತು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ನಡುವಿನ ಈ ಸಹಭಾಗಿತ್ವವು ರಾಜ್ಯದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕವಾಗಲಿದ್ದು, ಹೂಡಿಕೆದಾರ ಸ್ನೇಹಿ ಹಾಗೂ ಸುಸ್ಥಿರ ಹೂಡಿಕೆ ವ್ಯವಸ್ಥೆಯನ್ನು ನಿರ್ಮಿಸಲು ಸಹಾಯ ಮಾಡುತ್ತದೆ. 

ಆಶಿಶ್‌ಕುಮಾರ್ ಚೌಹಾಣ್ (MD & CEO, NSE) ಅವರ ಹೇಳಿಕೆ:”ಶಿಕ್ಷಣ, ಹಣಕಾಸು ಸಾಕ್ಷರತೆ, ನಿರ್ವಹಣೆ ಮತ್ತು ಹೂಡಿಕೆಗಳು ಜ್ಞಾನಯುತ, ಸಬಲ ಮತ್ತು ಸುಸ್ಥಿರ ಕರ್ನಾಟಕವನ್ನು ನಿರ್ಮಿಸುವಲ್ಲಿ ಪ್ರಮುಖ ಸ್ತಂಭಗಳಾಗಿವೆ.

ಕರ್ನಾಟಕ ಸರ್ಕಾರದೊಂದಿಗಿನ ಈ ಸಹಯೋಗದ ಮೂಲಕ, ವಿದ್ಯಾರ್ಥಿಗಳಿಗೆ ಭದ್ರತಾ ಮಾರುಕಟ್ಟೆ ಹಾಗೂ ಹೂಡಿಕೆಯ ಪ್ರಾಯೋಗಿಕ ಜ್ಞಾನವನ್ನು ನೀಡಲು NSE ಬದ್ಧವಾಗಿದೆ. ಇದು ಅವರ ಉದ್ಯೋಗ ಸಾಮರ್ಥ್ಯ ಮತ್ತು ಉದ್ಯಮಶೀಲತೆಯ ಸಾಮರ್ಥ್ಯವನ್ನೂ ಹೆಚ್ಚಿಸಲಿದೆ. ಭಾರತದ ಬೆಳವಣಿಗೆಯ ಕಥೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬಲ್ಲ, ಆರ್ಥಿಕವಾಗಿ ಜಾಗೃತ ಹಾಗೂ ಭವಿಷ್ಯಕ್ಕೆ ಸಿದ್ಧವಿರುವ ಯುವ ಕಾರ್ಯಪಡೆಯನ್ನು ಸೃಷ್ಟಿಸುವ ನಮ್ಮ ದೃಷ್ಟಿಕೋನವನ್ನು ಈ ಉಪಕ್ರಮವು ಪ್ರತಿಬಿಂಬಿಸುತ್ತದೆ”.

LEAVE A REPLY

Please enter your comment!
Please enter your name here