ಮಿಲಾಗ್ರಿಸ್ ಕಾಲೇಜು, ಮಂಗಳೂರು ಇದರ ವಾರ್ಷಿಕ ಕ್ರೀಡಾಕೂಟವು ನವೆಂಬರ್ 11, 2025 ರಂದು ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು.
ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಜೆರಾಲ್ಡ್ ಸ್ಯಾಂಟೋಷ್ ಡಿಸೋಜಾ ಮಾತನಾಡಿ, ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಆರೋಗ್ಯದ ಬೆಳವಣಿಗೆಗೆ ಕ್ರೀಡೆ ಅತ್ಯಂತ ಪ್ರಯೋಜನಕಾರಿ. ಆಧುನಿಕ ಆಹಾರ ಪದ್ಧತಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹಾಗಾಗಿ ವಿದ್ಯಾರ್ಥಿಗಳು ತಮ್ಮ ಬಾಲ್ಯದಲ್ಲೇ ದೈಹಿಕ ಸದೃಢತೆಯನ್ನು
ಕಾಪಾಡಿಕೊಳ್ಳುವುದು ಉತ್ತಮ ಎಂದರು.
ಕಾರ್ಯಕಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ರೆ. ಡಾ ಆಲ್ವಿನ್ ಸೇರಾವೋ ಮಾತನಾಡಿ ವಿದ್ಯಾರ್ಥಿಗಳು ತಮ್ಮ ದೈಹಿಕ ಸಾಮರ್ಥ್ಯವನ್ನು ಬಲಪಡಿಸಲು ಕ್ರೀಡೆ ಪ್ರಮುಖ ಚಟುವಟಿಕೆ ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ, ಮಿಲಾಗ್ರಿಸ್ ಸಿಬಿಸಿಎಸ್ ಇದರ ಪ್ರಾಂಶುಪಾಲರಾದ ರೆ. ಫಾ. ಜೊಸೆಫ್ ಉದಯ ಫರ್ನಾಂಡಿಸ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ
ಮೆಲ್ವಿನ್ ವಾಸ್ ಹಾಗೂ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಡಯಾನಾ ಲೋಬೋ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ವಿಭಾಗದ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಮಂಜುಶ ಸ್ವಾಗತಿಸಿದರು. ಉಪನ್ಯಾಸಕಿ ಲೆನಿಷ ನಿರೂಪಿಸಿದರು.

