Friday, February 14, 2025
Homeರಾಷ್ಟ್ರೀಯಪಿಕ್ನಿಕ್‌ಗೆ ತೆರಳಿದ್ದ ಇಬ್ಬರು ಸೇನಾಧಿಕಾರಿಗಳನ್ನು ಥಳಿಸಿ, ಅವರ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಸಶಸ್ತ್ರದಾರಿ...

ಪಿಕ್ನಿಕ್‌ಗೆ ತೆರಳಿದ್ದ ಇಬ್ಬರು ಸೇನಾಧಿಕಾರಿಗಳನ್ನು ಥಳಿಸಿ, ಅವರ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಸಶಸ್ತ್ರದಾರಿ ದುಷ್ಕರ್ಮಿಗಳು

ಇಬ್ಬರು ತರಬೇತಿ ನಿರತ ಸೇನಾಧಿಕಾರಿಗಳು, ತಮ್ಮ ಇಬ್ಬರು ಸ್ನೇಹಿತೆಯರೊಂದಿಗೆ ಪಿಕ್ನಿಕ್​ಗೆ ಹೋಗಿದ್ದ ವೇಳೆ, ಶಸ್ತ್ರಸಜ್ಜಿತ ದುಷ್ಕರ್ಮಿಗಳು ಇಬ್ಬರು ಅಧಿಕಾರಿಗಳನ್ನೂ ಥಳಿಸಿ, ಒಬ್ಬ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ.
ಜಿಲ್ಲೆಯ ಮೊವ್ ಕಂಟೋನ್ಮೆಂಟ್‌ನಲ್ಲಿರುವ ಆರ್ಮಿ ವಾರ್ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿದ್ದ ಇಬ್ಬರು ಮೇಜರ್ ಶ್ರೇಣಿಯ ಅಧಿಕಾರಿಗಳು ಜಾಮ್ ಗೇಟ್ ಪ್ರದೇಶದಲ್ಲಿ ಇಬ್ಬರು ಮಹಿಳಾ ಸ್ನೇಹಿತರ ಜೊತೆಗೆ ಪಿಕ್ನಿಕ್‌ಗೆ ತೆರಳಿದಾಗ ಈ ಘಟನೆ ಸಂಭವಿಸಿದೆ.
ಎಂಟರಿಂದ ಹತ್ತು ಜನರು ಪಿಸ್ತೂಲು, ಚಾಕು ಸೇರಿದಂತೆ ಇತರೆ ಶಸ್ತ್ರಾಸ್ತ್ರಗಳನ್ನು ಹಿಡಿದು ಅವರ ಕಾರನ್ನು ಸುತ್ತುವರೆದರು. ಕಾರಿನಲ್ಲಿದ್ದ ನಾಲ್ಕು ಮಂದಿಗೂ ದುಷ್ಕರ್ಮಿಗಳು ಥಳಿಸಿದ್ದಾರೆ. ಬಳಿಕ ಅವರ ಬಳಿ ಇದ್ದ ಬೆಲೆಬಾಳುವ ವಸ್ತುಗಳನ್ನು ದೋಚಿದ್ದಾರೆ.
ನಂತರ ಯುವತಿಯನ್ನು ಒತ್ತೆಯಾಳಾಗಿರಿಸಿಕೊಂಡು 10 ಲಕ್ಷ ರೂ. ಕೊಡುವಂತೆ ಕೇಳಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸುತ್ತಿದ್ದಂತೆ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ. ನಾಲ್ಕು ಜನರನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆತರಲಾಯಿತು. ವೈದ್ಯರ ಪ್ರಕಾರ, ಅಧಿಕಾರಿಗಳ ದೇಹದಲ್ಲಿ ಗಾಯಗಳ ಚಿಹ್ನೆಗಳು ಇವೆ. ದಾಳಿಕೋರರು ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ವೈದ್ಯಕೀಯ ವರದಿ ದೃಢಪಡಿಸಿದೆ.
ಲೂಟಿ, ಡಕಾಯಿತಿ, ಅತ್ಯಾಚಾರ ಮತ್ತು ಶಸ್ತ್ರಾಸ್ತ್ರ ಕಾಯ್ದೆಗೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಇಬ್ಬರು ಆರೋಪಿಗಳನ್ನು ಇಂದೋರ್ ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳನ್ನು ಬಂಧಿಸಲು ಹತ್ತು ತಂಡಗಳನ್ನು ಕೂಡ ರಚಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ, ಪ್ರಕರಣವನ್ನು ಭೇದಿಸಲು 10 ತಂಡಗಳನ್ನು ರಚಿಸಲಾಗಿದೆ ಮತ್ತು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular