Sunday, July 14, 2024
Homeಅಪರಾಧಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಇಬ್ಬರು ಆರೋಪಿಗಳ ಬಂಧನ

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಇಬ್ಬರು ಆರೋಪಿಗಳ ಬಂಧನ

2023 ಜೂನ್ 10 ರಂದು ಕುಂದಾಪುರದ ಖಾಸಗಿ ಲಾಡ್ಜ್ ಒಂದರಲ್ಲಿ ರಾತ್ರಿ ಚಿನ್ನದ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಓರ್ವನಿಂದ ಸುಮಾರು ಇಪ್ಪತ್ತೆರಡೂವರೆ ಲಕ್ಷ ಮೌಲ್ಯದ ಚಿನ್ನಾಭರಣ ಕಳುವುಗೈದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಅಂದಾಜು 10 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕುಂದಾಪುರ ಪೊಲೀಸರು ಮುಂಬೈನಲ್ಲಿ ವಶಪಡಿಸಿಕೊಂಡಿದ್ದಾರೆ. ರಾಜಸ್ಥಾನದ ಪಾಲಿ ಜಿಲ್ಲೆಯ ಖೋರ್ ಗ್ರಾಮದ ರಾಮ್ ರಾಯಲ್ ಯಾನೆ ಬಾಳು ರಾಮ್(21) ಹಾಗೂ ಸೇವಾರಿ ಗ್ರಾಮ ಬರ್ಲಾಬೆರಾ ಗ್ರಾಮದ ಪ್ರವೀಣ್ ಕುಮಾರ್ (25) ಬಂಧಿತರು.

ಹಾಜಿ ಗೋಲ್ಡ್ ಎಂಡ್ ಡೈಮೆಂಡ್ ಎಂಬ ಜ್ಯುವೆಲ್ಲರಿಯ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಓರ್ವರು ಜೂನ್ 10ರಂದು ವ್ಯಾಪಾರಕ್ಕೆಂದು ಬಂದಿದ್ದು‌ ಉಪ್ಪುಂದಕ್ಕೆ ತೆರಳಿದ್ದರು. ಅಲ್ಲಿಂದ ಸಂಜೆ ವಾಪಸಾಗಿ ರಾತ್ರಿ ಕುಂದಾಪುರದ ಖಾಸಗಿ ಹೊಟೇಲೊಂದರಲ್ಲಿ ರಾಜಸ್ಥಾನ ಮೂಲದ ರಾಮ್‌ ಎಂಬಾತನ ಜತೆ 421 ಗ್ರಾಂ. ತೂಕದ ಚಿನ್ನಾಭರಣವನ್ನು ಮಂಚದ ಕೆಳಗಿಟ್ಟು ಮಲಗಿದ್ದರು. ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಎದ್ದು ನೋಡಿದಾಗ ರಾಮ್‌ ನಾಪತ್ತೆಯಾಗಿದ್ದು, ಚಿನ್ನಾಭರಣದ ಬ್ಯಾಗ್‌ ಕೂಡ ಇರಲಿಲ್ಲ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕುಂದಾಪುರ ಡಿವೈಎಸ್‌ಪಿ ಕೆ.ಯು ಬೆಳ್ಳಿಯಪ್ಪ ನಿರ್ದೇಶನದಲ್ಲಿ ಕುಂದಾಪುರ ವೃತ್ತ ನಿರೀಕ್ಷಕ ಯು.ಬಿ. ನಂದಕುಮಾರ್‌ ಮಾರ್ಗದರ್ಶನದಲ್ಲಿ ತಾಂತ್ರಿಕ ಮಾಹಿತಿ ಮೂಲಕ ಆರೋಪಿಗಳು ಮುಂಬಯಿಯಲ್ಲಿರುವುದಾಗಿ ಪತ್ತೆ ಹಚ್ಚಿ, ಅವರಲ್ಲಿದ್ದ 10 ಲಕ್ಷ ರೂ. ಮೌಲ್ಯದ 175 ಗ್ರಾಂ. ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular