ಗುರುವಾಯನಕೆರೆ : ರಸ್ತೆ ದಾಟುತ್ತಿದ್ದ ವೇಳೆ ಮಿನಿ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಮುಖ್ಯರಸ್ತೆಯ ವಿನಾಯಕ್ ಏಜೆನ್ಸಿ ಸಮೀಪ ನಡೆದಿದೆ.
ಮಾಹಿತಿಯ ಪ್ರಕಾರ, ವೃದ್ಧರು ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಮಿನಿ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ವೃದ್ಧರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಬಳಿಕ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವೃದ್ಧರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಗುರುತು ಪತ್ತೆ ಹಾಗೂ ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.

