ಮನೆ ಕಟ್ಟಲು ಭೂಮಿ ಸಮತಟ್ಟು ಮಾಡುವ ಉದ್ದೇಶದಿಂದ ಕಲ್ಲು ತೆಗೆಯಲು 50 ಸಾವಿರ ರೂ. ಲಂಚದ ಬೇಡಿಕೆಯಿಟ್ಟು ಅದನ್ನು ಸ್ವೀಕರಿಸುತ್ತಿದ್ದ ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಕೃಷ್ಣವೇಣಿ ಹಾಗೂ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ವ್ಯಕ್ತಿಯೊಬ್ಬರು ಉಳ್ಳಾಲ ತಾಲೂಕು ಇರಾ ಗ್ರಾಮದ 1.39 ಎಕರೆ ವಿಸ್ತೀರ್ಣದ ಜಮೀನಿನ 35 ಸೆಂಟ್ಸ್ ಪ್ರದೇಶದಲ್ಲಿ ಮನೆ | ಕಟ್ಟಲು ಕಟ್ಟಡ ಕಲ್ಲು ತೆಗೆದು ಸಮತಟ್ಟು ಮಾಡಲು ಅನುಮತಿ ನೀಡಲು ಮಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ 2024ರ ಅ.28ರಂದು ಅರ್ಜಿ ಸಲ್ಲಿಸಿದ್ದರು.
ಭೂಮಿ ಸಮತಟ್ಟು ಮಾಡುವ ಸಲುವಾಗಿ ಜಮೀನಿನಲ್ಲಿ ಗೆ ಲಭ್ಯವಿರುವ ಕಟ್ಟಡ ಕಲ್ಲು ತೆಗೆಯಲು ಪ್ರಮಾಣಪತ್ರ | ನೀಡಬಹುದಾಗಿದೆ ಎಂದು ಉಳ್ಳಾಲ ತಾಲೂಕು ತಹಸೀಲ್ದಾರ್ ಮಾ.21ರಂದು ವರದಿ ಸಲ್ಲಿಸಿದ್ದರೂ, ಗಣಿ ಇಲಾಖೆಯಿಂದ ಅನುಮತಿ ನೀಡಿರಲಿಲ್ಲ.
ಈ ಬಗ್ಗೆ ಅರ್ಜಿದಾರರು ವಿಚಾರಿಸಲು ಮಂಗಳೂರು ಗಣಿ ಇಲಾಖೆ ಕಚೇರಿಗೆ ತೆರಳಿದಾಗ, ಉಪ ನಿರ್ದೇಶಕಿ ಕೃಷ್ಣವೇಣಿಯವರು ಸಿಬ್ಬಂದಿ ಪ್ರದೀಪ್ ಎಂಬವರನ್ನು ಕರೆಯಿಸಿ ಫೈಲ್‌ಗೆ 50 ಸಾವಿರ ರೂ. ತೆಗೆದುಕೊಳ್ಳಿ. ನಂತರ ಸಹಿ ಮಾಡೋಣ ಎಂದು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಮಂಗಳೂರು ಗಣಿ ಮಧು ಇಲಾಖೆ ಉಪ ನಿರ್ದೇಶಕಿ ಕೃಷ್ಣವೇಣಿ ಮತ್ತು ಸಿಬ್ಬಂದಿ ಪ್ರದೀಪ್ ವಿರುದ್ಧ ಮಂಗಳೂರು ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಬುಧವಾರ ಕೃಷ್ಣವೇಣಿಯವರು ಚಾಲಕ ಮಧು ಮೂಲಕ 50 ಸಾವಿರ ರೂ. ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಉಪ ನಿರ್ದೇಶಕಿ ಜತೆಗೆ ಸಿಬ್ಬಂದಿ ಪ್ರದೀಪ್ ಮತ್ತು ಚಾಲಕ ಮಧು ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗ ಪ್ರಭಾರ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಡಾ.ಗಾನ ಪಿ.ಕುಮಾರ್, ಸುರೇಶ್ ಕುಮಾರ್ ಪಿ., ಪೊಲೀಸ್ ನಿರೀಕ್ಷಕರಾದ ಭಾರತಿ ಜಿ., ಚಂದ್ರಶೇಖರ್ ಕೆ.ಎನ್., ಉಡುಪಿ ಲೋಕಾಯುಕ್ತ ನಿರೀಕ್ಷಕ ಮಂಜುನಾಥ, ರಾಜೇಂದ್ರ ನಾಯ್ಕ ಸಿಬ್ಬಂದಿ ಜತೆ ಟ್ಯಾಪ್ ಕಾರ್ಯಾಚರಣೆ ಕೈಗೊಂಡಿದ್ದರು.
ಹಿಂದೆ ಚಿಕ್ಕಬಳ್ಳಾಪುರ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯಾಗಿದ್ದ ಕೃಷ್ಣವೇಣಿಯವರ ಮೇಲಿನ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು, ಚಿಕ್ಕಬಳ್ಳಾಪುರ ಮತ್ತು ಮಂಗಳೂರಿನ ಕೃಷ್ಣವೇಣಿಯವರ ಕಚೇರಿ ಹಾಗೂ ಮನೆಗೆ ನವೆಂಬರ್‌ನಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು.