ಬಂಟ್ವಾಳ: ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಇಂದು ಮಾಜಿ ಸಚಿವ ಬಿ. ರಮಾನಾಥ ರೈ ಅವರ ನಿವಾಸಕ್ಕೆ ಭೇಟಿ ನೀಡಿದರು. ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಖಂಡ್ರೆ ಅವರು ರೈ ಅವರೊಂದಿಗೆ ಚರ್ಚಿಸಿದರು.
ಕಾಂಗ್ರೆಸ್ ಮುಖಂಡರುಗಳಾದ ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಸುಧೀರ್ ಶೆಟ್ಟಿ, ಪಿಯೂಸ್ ಎಲ್. ರಾಡ್ರಿಗಸ್, ಪದ್ಮಶೇಖರ ಜೈನ್, ಮಾಯಿಲಪ್ಪ ಸಾಲ್ಯಾನ್, ಶಬೀರ್ ಸಿದ್ದಕಟ್ಟೆ ಮತ್ತು ಪಕ್ಷದ ಇತರ ಪ್ರಮುಖರು, ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.