ಕಾರ್ಕಳ : ಮಿಯ್ಯಾರು ಗ್ರಾಮದ ಬಾರೊಂದರ ಕಟ್ಟಡದ ಟೆರೇಸ್‌ನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ 27ರಂದು ಪತ್ತೆಯಾಗಿದೆ. ಮಾಳ ಗ್ರಾಮದ ಮಹೇಶ್ ಎಂಬವರು ಬಾರ್‌ನಲ್ಲಿ ಕೆಲಸ ಮಾಡುತ್ತಿರುವಾಗ ಬಾರ್‌ನ ಹೊರಗಡೆಯಿಂದ ವಿಪರೀತ ವಾಸನೆ ಬರುತ್ತಿದ್ದು ಮಹೇಶ್ ಟೆರೇಸ್‌ನ ಮೇಲೆ ಹೋದಾಗ ಅಂಗಾತನೆ ಮಲಗಿದ ಸ್ಥಿತಿಯಲ್ಲಿ 50 ರಿಂದ 55 ವರ್ಷ ಪ್ರಾಯದ ಗಂಡಸಿನ ಮೃತದೇಹ ಪತ್ತೆಯಾಗಿದೆ. ಮೃತದೇಹ ಕೊಳೆತು ವಾಸನೆ ಬರುತ್ತಿದ್ದು ಗುರುತು ತಿಳಿಯುವ ಸ್ಥಿತಿಯಲ್ಲಿರಲಿಲ್ಲ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.