ಕಾವೇರಿ ತೀರ್ಥೋದ್ಭವದ ಅಗತ್ಯ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ

0
4

ಭಾಗಮಂಡಲ : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು ಸಿದ್ಧತೆಗಳು ನಡೆದಿವೆ.
ಅಕ್ಟೋಬರ್ 17 ರಂದು ರಾತ್ರಿ 7.50 ಗಂಟೆಗೆ ಸಂಭವಿಸುವ ಪವಿತ್ರ ತೀರ್ಥೋದ್ಭವ ಕಣ್ತುಂಬಿಕೊಳ್ಳಲು ಭಕ್ತರು ಕಾತರರಾಗಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ಭಕ್ತರು ಪವಿತ್ರ ತೀರ್ಥ ಪಡೆಯಲು ತಲಕಾವೇರಿಗೆ ಆಗಮಿಸಲಿದ್ದಾರೆ.

ಕೊಡಗು ಜಿಲ್ಲೆ ಸೇರಿದಂತೆ ನಾಡಿನ ಹಾಗೂ ನೆರೆ ಹೊರಯ ರಾಜ್ಯದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಲಕಾವೇರಿಗೆ ಆಗಮಿಸಲಿದ್ದಾರೆ. ಭಕ್ತಾಧಿಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಕುಡಿಯುವ ನೀರು, ಭಕ್ತಾಧಿಗಳು ಸಾಲುಗಟ್ಟಿ ಬರಲು ಬ್ಯಾಲಿಕೇಡ್‌ಗಳ ನಿರ್ಮಾಣ, ಗಣ್ಯರು ಹಾಗೂ ಪತ್ರಕರ್ತರಿಗೆ ಪ್ರತ್ಯೇಕ ಬ್ಯಾಲಿಕೇಡ್ ಅಳವಡಿಸಲಾಗಿದೆ. ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಹೂವಿನ ಅಲಂಕಾರ ಸೇರಿದಂತೆ ಹಲವು ಸಿದ್ಧತೆಗಳು ನಡೆದಿವೆ. ಕೊಡಗು ಏಕೀಕರಣ ರಂಗದಿಂದ ಪ್ರಸಾದ ವಿತರಣೆ ನಡೆಯಲಿದೆ.

ಭಾಗಮಂಡಲದಿಂದ-ತಲಕಾವೇರಿ ವರೆಗೆ ಬೆಳಕಿನ ವ್ಯವಸ್ಥೆ, ಕಳೆದ ಬಾರಿಯಂತೆ ಈ ಬಾರಿಯೂ ಕೆಎಸ್ಆರ್‌ಟಿಸಿ ವತಿಯಿಂದ 25 ಬಸ್ ವ್ಯವಸ್ಥೆ ಮಾಡಲಾಗಿದ್ದು, ಭಕ್ತಾದಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ.

ತಲಕಾವೇರಿಯಲ್ಲಿ ತಾಯಿ ಕಾವೇರಿಮಾತೆ ಕುರಿತು ಗೀತಾ ಗಾಯನ ಕಾರ್ಯಕ್ರಮಕ್ಕೆ ಪ್ರತ್ಯೇಕ ವೇದಿಕೆ ನಿರ್ಮಿಸಲಾಗಿದ್ದು, ಕನ್ನಡ ಮತ್ತು ಸಂಸ್ಕೃತಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗೀತಾ ಗಾಯನ ಕಾರ್ಯಕ್ರಮ ನಡೆಯಲಿದೆ.

ಪೊಲೀಸ್ ಇಲಾಖೆಯಿಂದ ಅಗತ್ಯ ಬಂದೋಬಸ್ತ್ ಮಾಡಲಾಗಿದ್ದು, ಉಪ ಪೊಲೀಸ್ ವರಿಷ್ಠಾಧಿಕಾರಿಗಳು, ಪಿಎಸ್ಐಗಳು, ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್‌ಗಳು,
ಪೊಲೀಸರು, ಹೋಂ ಗಾರ್ಡ್‌ಗಳು, ಕರ್ತವ್ಯ ನಿರ್ವಹಿಸಲಿದ್ದಾರೆ. ಜೊತೆಗೆ ಅಗತ್ಯ ಇರುವ ಕಡೆಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ.

ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ತಲಕಾವೇರಿಗೆ
ಭೇಟಿ ನೀಡಿ ದೇವಾಲಯದ ಬಳಿ ಭಂಡಾರ ಮನೆ ನೂತನ ಕಟ್ಟಡವನ್ನು ಉದ್ಘಾಟಿಸಿದರು. 1 ಕೋಟಿ ರೂ. ವೆಚ್ಚದಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ವತಿಯಿಂದ ನೀಡಲಾಗುವ ಅನುದಾನದಲ್ಲಿ ಭಂಡಾರ ಮನೆ ಕಟ್ಟಡ ನಿರ್ಮಿಸಲಾಗಿದೆ.

ಬಳಿಕ ತಲಕಾವೇರಿ ಜಾತ್ರಾ ಮಹೋತ್ಸವ ಸಿದ್ಧತೆ ಸಂಬಂಧ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾಹಿತಿ ಪಡೆದರು. ಬಳಿಕ ಮಾತನಾಡಿದ ಶಾಸಕರು, ತಾಯಿ ಕಾವೇರಿ ಪವಿತ್ರ ತೀರ್ಥೋದ್ಭವ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾವೇರಿ ಮಾತೆ ತೀರ್ಥರೂಪಿಣಿ ದರ್ಶನ ಪಡೆಯಲು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದು ಭಕ್ತಾದಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನ ಹರಿಸಲಾಗಿದೆ ಎಂದರು.

ಜಿಲ್ಲಾಡಳಿತ, ಪೊಲೀಸ್, ದೇವಾಲಯ ಸಮಿತಿ, ವಿವಿಧ ಇಲಾಖೆಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ತಯಾರಿ ಮಾಡಿಕೊಂಡಿದ್ದಾರೆಂದು ಮಾಹಿತಿ ನೀಡಿದರು.

ಕೊಡಗು ಏಕೀಕರಣ ರಂಗದಿಂದ ಪ್ರಸಾದ ವ್ಯವಸ್ಥೆ ಇರಲಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಲಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಜರಾಯಿ ಇಲಾಖೆಯಿಂದ 75 ಲಕ್ಷ ರೂ. ಬಿಡುಗಡೆ ಆದೇಶ ಆಗಿದೆ ಎಂದು ಶಾಸಕರು ಮಾಹಿತಿ ನೀಡಿದರು.

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಜರಾಯಿ ಇಲಾಖೆಯಿಂದ 75
ಲಕ್ಷ ರೂ. ಬಿಡುಗಡೆಗೆ ಆದೇಶ ಆಗಿದೆ ಎಂದು ಶಾಸಕರುಮಾಹಿತಿ ನೀಡಿದರು. ಭಾಗಮಂಡಲದಿಂದ ತಲಕಾವೇರಿಯ ವರೆಗೆ ನಡೆಯಲಿರುವ ಪಾದಯಾತ್ರೆಯಲ್ಲಿ ಸಹ ಪಾಲ್ಗೊಳ್ಳಲಾಗುವುದು ಎಂದು ಶಾಸಕರಾದ ಪೊನ್ನಣ್ಣ ಅವರು ತಿಳಿಸಿದರು.

ವರದಿ: ಪ್ರಿತುನ್ ಪೂವಣ್ಣ