ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆದ ಪ್ರಕರಣ; ಆರೋಪಿ ಅರೆಸ್ಟ್

0
57

ಬೆಂಗಳೂರು : ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ ಕಚೇರಿ ಬಳಿ ನಡೆದ ಬಿಜೆಪಿ ಪ್ರತಿಭಟನೆ ವೇಳೆ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಶಿವಾಜಿನಗರ ಪೊಲೀಸರು ಆರೋಪಿ ಪುಣ್ಯೇಶ್ ಎಂಬಾತನನ್ನು ವಶಕ್ಕೆ ಪಡೆದು ತಡರಾತ್ರಿವರೆಗೆ ವಿಚಾರಣೆ ನಡೆಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ಪುಣ್ಯೇಶ್ ಒಂದು ಬಾಕ್ಸ್‌ನಲ್ಲಿ ಮೊಟ್ಟೆಗಳನ್ನು ತಂದುಕೊಂಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಈ ಕೃತ್ಯದಲ್ಲಿ ಆತನೊಂದಿಗೆ ಇನ್ನೂ ಕೆಲವರು ಭಾಗಿಯಾಗಿರುವ ಶಂಕೆಯೂ ವ್ಯಕ್ತವಾಗಿದೆ.

ಮೊಟ್ಟೆಗಳನ್ನು ಎಲ್ಲಿಂದ ತರಲಾಯಿತು, ಮೊಟ್ಟೆ ಎಸೆಯಲು ಯಾರು ಸೂಚನೆ ನೀಡಿದ್ದರು ಹಾಗೂ ಘಟನೆಯಲ್ಲಿ ಭಾಗಿಯಾಗಿದ್ದ ಇತರರ ಪಾತ್ರ ಏನು ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಅಲ್ಲದೆ, ಇದು ಪೂರ್ವನಿಯೋಜಿತ ಕೃತ್ಯವೇ ಅಥವಾ ಯಾವುದೇ ಷಡ್ಯಂತ್ರದ ಭಾಗವೇ ಎಂಬ ಆಯಾಮದಲ್ಲಿಯೂ ತನಿಖೆ ಮುಂದುವರಿದಿದೆ.