ಸುರತ್ಕಲ್ :ಎನ್ ಐ ಎ ನಿಂದ ಎಸ್ಡಿಪಿಐ, ಪಿಎಫ್ಐ ಸದಸ್ಯರ ಮನೆಗೆ ದಾಳಿ, ವಶಕ್ಕೆ ಪಡೆದಿರುವುದನ್ನು ಖಂಡಿಸಿ ಸುರತ್ಕಲ್ ನಲ್ಲಿ ಏಕಾಏಕಿ ಹೆದ್ದಾರಿ ತಡೆ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತ ಪಡಿಸಿರುವ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ದೇಶದ್ರೋಹಿ ಕೃತ್ಯಗಳಲ್ಲಿ ಸಹಕರಿಸಿದ ವ್ಯಕ್ತಿಗಳ ವಿರುದ್ದ ಮತ್ತು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಎನ್ ಐ ಎ ತನಿಖೆ ನಡೆಸುತ್ತಿದೆ. ಆರೋಪಿಗಳ ವಿಚಾರಣೆ ತೀವ್ರಗೊಳಿಸಿದೆ. ಇಂತಹ ಸಂದರ್ಭದಲ್ಲಿ ಯಾರಾದರೂ ಪುಂಡಾಟಿಕೆ, ಕಾನೂನು ಉಲ್ಲಂಘನೆ ಮಾಡಿದಲ್ಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಸುರಕ್ಷತಾ ಕ್ರಮವಾಗಿ ಪೊಲೀಸ್ ಕಣ್ಗಾವಲು ಹೆಚ್ಚಿಸಬೇಕು ಎಂದು ಸಲಹೆ ನೀಡಿದ್ದಾರೆ.

Leave a Reply

Your email address will not be published.