ಕನಕದಾಸರ ಜಯಂತಿಯಲ್ಲಿ ಮುಖ್ಯ ಅತಿಥಿಯಾಗಿ ಶಾಸಕ ಡಾ. ಮಂತರ್ ಗೌಡ ಭಾಗಿ :- ಪುಷ್ಪನಮನ ಸಲ್ಲಿಕೆ

0
7

ಕುಶಾಲನಗರ‌: ಕಲಾಭವನದಲ್ಲಿ ಆಯೋಜಿಸಲಾಗಿದ್ದ ದಾಸ ಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಡಾ. ಮಂತರ್ ಗೌಡ ಅವರು ಭಾಗವಹಿಸಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನಗಳನ್ನು ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, 15ನೇ ಶತಮಾನದಲ್ಲಿಯೇ ತಮ್ಮ ಕೀರ್ತನೆಗಳ ಮೂಲಕ ಸಮಾಜಕ್ಕೆ ಸಮಾನತೆ, ಸಾಮಾಜಿಕ ನ್ಯಾಯ, ಮಾನವೀಯತೆ ಹಾಗೂ ಭಕ್ತಿಯ ಮಹತ್ವವನ್ನು ಸಾರಿದ ಕನಕದಾಸರ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ. ಜಾತಿ-ಮತಗಳ ಭೇದಭಾವವಿಲ್ಲದೆ ಎಲ್ಲರೂ ಸಮಾನರು ಎಂಬ ಅವರ ಸಂದೇಶ ಸಮಾಜಕ್ಕೆ ಸದಾ ಮಾರ್ಗದರ್ಶನ ನೀಡುತ್ತದೆ. ಅವರ ಸಾಹಿತ್ಯ ಮತ್ತು ತತ್ವಾದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ
ಎಂದು ತಿಳಿಸಿದರು.

ವರದಿ: ಪ್ರಿತುನ್ ಪೂವಣ್ಣ