ಹೆಜಮಾಡಿ-ಪಡುಬಿದ್ರಿ-ಕಾಪು- ಮೂಳೂರು-ಮಟ್ಟು ಭಾಗದ ಕಡಲ್ಕೊರೆತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

0
1

ಕೆಲವು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಯಿಂದ ಹೆಜಮಾಡಿ – ಪಡುಬಿದ್ರಿ – ಕಾಪು – ಮೂಳೂರು – ಮಟ್ಟು ಭಾಗದಲ್ಲಿ ವಿಪರೀತ ಕಡಲ್ಕೊರೆತ ಉಂಟಾಗಿದ್ದು ಇಂದು ದಿನಾಂಕ 02-08-2026 ರಂದು ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದಿನೇ ದಿನೇ ಕಡಲ್ಕೊರೆತ ಹೆಚ್ಚುತ್ತಿದ್ದು ವಿಪತ್ತು ನಿರ್ವಹಣಾ ನಿಧಿಯಿಂದ ತುರ್ತು ಕಾಮಗಾರಿಗೆ ಗರಿಷ್ಠ ಅನುದಾನ ಮಂಜೂರು ಮಾಡುವಂತೆ ಶಾಸಕರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಜಿ.ಎಂ ರಾಥೋಡ್, ಸಹಾಯಕ ಅಭಿಯಂತರಾದ ಪ್ರಶಾಂತ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.