ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಮತ್ತು ಹಿಂದೂ ಪ್ರೌಢ ಶಾಲೆ, ಶಿರ್ವ ಇವರ ಸಹಯೋಗದೊಂದಿಗೆ ದಿನಾಂಕ 22-08-2026 ರಂದು ಹಿಂದೂ ಪ್ರೌಢ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾದ “ಸಾಂಸ್ಕೃತಿಕ ಸೌರಭ” ಕಾರ್ಯಕ್ರಮವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ.ಎ ಗಫೂರ್, ಕಾಪು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ, ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಮಟ್ಟಾರು ರತ್ನಾಕರ್ ಹೆಗ್ಡೆ, ಆಡಳಿತಾಧಿಕಾರಿಗಳಾದ ವೈ ಭಾಸ್ಕರ್ ಶೆಟ್ಟಿ, ಪ್ರಾಂಶುಪಾಲರಾದ ಸುಜಾತಾ, ಮುಖ್ಯ ಶಿಕ್ಷಕರಾದ ವಸಂತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಉಪಸ್ಥಿತರಿದ್ದರು.


