Sunday, July 14, 2024
Homeಬೆಳ್ತಂಗಡಿರಾತ್ರೋರಾತ್ರಿ ಪೂಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್‌ ಪೂಂಜಾ: ವಾರದೊಳಗೆ ಸಮಸ್ಯೆ ನಿವಾರಿಸುವಂತೆ ಸೂಚನೆ

ರಾತ್ರೋರಾತ್ರಿ ಪೂಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್‌ ಪೂಂಜಾ: ವಾರದೊಳಗೆ ಸಮಸ್ಯೆ ನಿವಾರಿಸುವಂತೆ ಸೂಚನೆ

ಬೆಳ್ತಂಗಡಿ: ಪೂಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮಳೆಗಾಲದಲ್ಲಿ ವಾಹನ ಸವಾರರಿಗೆ ನರಕವನ್ನೇ ಸೃಷ್ಟಿಸಿದೆ. ಮಳೆಗಾಲ ಆರಂಭವಾದ ನಂತರ ಅವೈಜ್ಞಾನಿಕ ಕಾಮಗಾರಿಯಿಂದಾಗಿ ರಸ್ತೆಗಳೆಲ್ಲಾ ಕೆಸರುಮಯವಾಗಿ ಸಂಚರಿಸಲು ಯೋಗ್ಯವಿಲ್ಲದಂತಾಗಿದೆ. ಈ ಬಗ್ಗೆ ಸಾರ್ವಜನಿಕ ದೂರು ಹೆಚ್ಚಾಗುತ್ತಿದ್ದಂತೆ ಶಾಸಕ ಹರೀಶ್‌ ಪೂಂಜಾ ಸ್ವತಃ ಹೆದ್ದಾರಿಯಲ್ಲಿ ಪ್ರಯಾಣಿಸಿ ಕಾಮಗಾರಿ ಪರಿಶೀಲಿಸಿದರು. ಅಲ್ಲದೆ, ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಕರೆಸಿ ತರಾಟೆಗೆ ತೆಗೆದುಕೊಂಡರು. ವಾರದೊಳಗೆ ಅಗತ್ಯ ಕಾಮಗಾರಿಗಳನ್ನು ಮುಗಿಸಿ, ಸಾರ್ವಜನಿಕರಿಗೆ ರಸ್ತೆ ಸುಗಮಗೊಳಿಸಬೇಕು ಎಂದು ತಾಕೀತು ಮಾಡಿದರು.
ರಾತ್ರೋರಾತ್ರಿ ಮಳೆಯ ನಡುವೆಯೇ ಹೆದ್ದಾರಿಯಲ್ಲಿ ಪ್ರಯಾಣಿಸಿದ ಶಾಸಕ ಪೂಂಜಾ ಗುತ್ತಿಗೆದಾರರ ನಿಧಾನಗತಿಯ ಕಾಮಗಾರಿ ಅಸಮಾಧಾನ ವ್ಯಕ್ತಪಡಿಸಿದರು. ಕೆಲವೆಡೆ ಕೆಸರಿನಿಂದ ವಾಹನ ಸಂಚರಿಸದಂತಾಗಿದೆ. ಅಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು. ಶಾಲಾ ಮಕ್ಕಳಿಗೆ ತೊಂದರೆಯಾಗುವಲ್ಲಿ ತಕ್ಷಣವೇ ಅದನ್ನು ಸರಿಪಡಿಸುವಂತೆ ನಿರ್ದೇಶಿಸಿದರು. ಭಾರೀ ಮಳೆಯ ನಡುವೆಯೂ ಪೂಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗೆ ಸ್ವತಃ ಪ್ರಯಾಣಿಸಿ ಕಾಮಗಾರಿ ಪರಿಶೀಲಿಸಿದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್‌ ಶಿವಪ್ರಸಾದ್‌ ಅಜಿಲ, ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular