ಶಾಸಕ ಹರೀಶ್ ಪೂಂಜರಿಂದ ಅರ್ಹ ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ

0
57

ಗ್ರಾಮೀಣ ನಿವೇಶನ ಯೋಜನೆಯಡಿ ನಡ ಹಾಗೂ ಕನ್ಯಾಡಿ ಗ್ರಾಮದ ವ್ಯಾಪ್ತಿಯ ಸ.ನಂ.126/ಬಿ ರಲ್ಲಿ ರಚಿಸಲಾದ ನಿವೇಶನಗಳಿಗೆ ನಡ ಗ್ರಾಮ ಪಂಚಾಯತ್ ವತಿಯಿಂದ ಅರ್ಹ 34 ಫಲಾನುಭವಿಗಳನ್ನು ಆಯ್ಕೆಗೊಳಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಆ ಎಲ್ಲಾ‌ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಶಾಸಕರಾದ ಹರೀಶ್ ಪೂಂಜರವರು ವಿತರಿಸಿದರು.
ಸ್ವಂತ ನಿವೇಶನದ ಕನಸನ್ನು ನನಸು ಮಾಡಿಕೊಂಡ ಫಲಾನುಭವಿಗಳ ಸಂತೋಷವು ಈ ಸಂದರ್ಭದಲ್ಲಿ ಗಮನ ಸೆಳೆಯಿತು.

ಈ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಶ್ರಮಿಸಿದ ನಡ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಸಂಬಂಧಿತ ಅಧಿಕಾರಿಗಳ ಕಾರ್ಯವನ್ನು ಶಾಸಕರು ಈ ಸಂದರ್ಭದಲ್ಲಿ ಶ್ಲಾಘಿಸಿದರು.

LEAVE A REPLY

Please enter your comment!
Please enter your name here