Thursday, July 25, 2024
Homeಬೆಳ್ತಂಗಡಿನಿವೃತ್ತ ಯೋಧ ವಿಕ್ರಮ್ ಜೆ.ಎನ್ ಅವರನ್ನು ಸ್ವಾಗತಿಸಿ ಅಭಿನಂದಿಸಿದ ಶಾಸಕ ಹರೀಶ್‌ ಪೂಂಜ

ನಿವೃತ್ತ ಯೋಧ ವಿಕ್ರಮ್ ಜೆ.ಎನ್ ಅವರನ್ನು ಸ್ವಾಗತಿಸಿ ಅಭಿನಂದಿಸಿದ ಶಾಸಕ ಹರೀಶ್‌ ಪೂಂಜ

ಭಾರತೀಯ ಭೂ ಸೇನೆಯಲ್ಲಿ 20 ವರ್ಷಗಳ ಕಾಲ ಸುಧೀರ್ಘ ಭಾರತಾಂಬೆಯ ಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ಜುಲೈ 3 ರಂದು ತವರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕು ನ್ಯಾಯತರ್ಪು ಗ್ರಾಮದ ನಿವೃತ್ತ ಯೋಧ ವಿಕ್ರಮ್ ಜೆ.ಎನ್ ಇವರನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಆತ್ಮೀಯವಾಗಿ ಸ್ವಾಗತಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಬೋಟ್ಯಾಡಿ,ಬೆಳ್ತಂಗಡಿ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ,ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ,ವಿಜಯ ಗೌಡ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular