
ಕಾಪು ವಿಧಾನಸಭಾ ಕ್ಷೇತ್ರದ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 80 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು 22-10-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಟ್ಸಾಲೆ ಮಟ್ಟಿಕಲ್ಲು ಶಿರೂರು ಸಂಪರ್ಕ ರಸ್ತೆ ಅಭಿವೃದ್ಧಿ – 20 ಲಕ್ಷ, ಜೋಡುಕುಕ್ಕು ವಡ್ಜೆ ರಸ್ತೆ ಹಾಗೂ ಕುಂಟಾಲುಕಟ್ಟೆ ಐದು ಸೆಂಟ್ಸ್ ಕಾಲನಿ ಕೃಷ್ಣ ಕುಲಾಲ್ ಮನೆಗೆ ಹೋಗುವ ರಸ್ತೆ ಅಭಿವೃದ್ಧಿ – 20 ಲಕ್ಷ, ಬೆಳ್ಳರ್ಪಾಡಿ ಗ್ರಾಮದ ಕಡ್ತಾಮಾರ್ ನಿಂದ ಕಲಾಯಿಗುಡ್ಡೆ ವರೆಗೆ ಹೋಗುವ ರಸ್ತೆ ಅಭಿವೃದ್ಧಿ – 20 ಲಕ್ಷ, ಶಿರೂರು ಗ್ರಾಮದ ನೇವೊಟ್ಟು ಪರಿಶಿಷ್ಟ ಪಂಗಡ ಕಾಲನಿ ರಸ್ತೆ ಅಭಿವೃದ್ಧಿ – 20 ಸೇರಿದಂತೆ ಒಟ್ಟು 80 ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಬೈರಂಪಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಸಾದ್ ಮಲ್ಯ, ಬೈರಂಪಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಪೆರ್ಡೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಜೀಯಾನಂದ ಹೆಗಡೆ, ಹಾಗೂ ಪಕ್ಷದ ಹಿರಿಯರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
