60 ಲಕ್ಷ ರೂಪಾಯಿ ವೆಚ್ಚದ ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

0
17

ಕಾಪು ವಿಧಾನಸಭಾ ಕ್ಷೇತ್ರದ ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 60 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು 22-10-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಂಪಳ್ಳಿ 5 ಸೆಂಟ್ಸ್ ಕಾಲೋನಿಯಿಂದ ಹೊಸಕ್ಲು ಹೋಗುವ ರಸ್ತೆ ಅಭಿವೃದ್ಧಿ – 20 ಲಕ್ಷ, ಕುಕ್ಕೆಹಳ್ಳಿ ಹಿತಾಯು ಆಯುರ್ವೇದ ಆಸ್ಪತ್ರೆ ಹೋಗುವ ರಸ್ತೆ ಅಭಿವೃದ್ಧಿ – 20 ಲಕ್ಷ, ಕುಕ್ಕೆಹಳ್ಳಿ ಜಡೆಕಲ್ಲು ಪಾದೆಯಿಂದ ಮೇಣ್ ಬೈಲ್ ಹೋಗುವ ರಸ್ತೆ ಅಭಿವೃದ್ಧಿ – 20 ಲಕ್ಷ ಸೇರಿದಂತೆ ಒಟ್ಟು 60 ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪುರಂದರ್ ಕೋಟ್ಯಾನ್, ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶಂಕರ್ ಸಾಲ್ಯಾನ್, ಉಷಾ ಪೂಜಾರಿ ಸ್ಥಳೀಯರಾದ ಹರಿಜೀವನ್ ಹೆಗಡೆ, ಶಿಲ್ಪಾ ಸಾಲ್ಯಾನ್, ಹರೀಶ್ ನಾಯ್ಕ್, ರತ್ನ ಕುಲಾಲ್ತಿ ಹಾಗೂ ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.