ಬಂಟ್ವಾಳ ತಾಲ್ಲೂಕಿನ ವಾಮದಪದವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಹಾಪ್ ಕಾಮ್ಸ್ ಸಹಭಾಗಿತ್ವದಲ್ಲಿ ಆರಂಭಗೊಂಡ ತೆಂಗಿನ ಕಾಯಿ ಖರೀದಿ ಮತ್ತು ಕ್ಯಾಂಪ್ಕೊ ಸಹಭಾಗಿತ್ವದಲ್ಲಿ ಆರಂಭಗೊಂಡ ಕಾಳು ಮೆಣಸು ಖರೀದಿ ಕೇಂದ್ರಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಬುಧವಾರ ಚಾಲನೆ ನೀಡಿದರು. ಸಂಘದ ಅಧ್ಯಕ್ಷ ಕಮಲ್ ಶೆಟ್ಟಿ ಬೊಳ್ಳಾಜೆ, ಉಪಾಧ್ಯಕ್ಷ ಸಂಜೀವ ಪೂಜಾರಿ, ಮಾಜಿ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ಜಿಲ್ಲಾ ಹಾಪ್ ಕಾಮ್ಸ್ ವ್ಯವಸ್ಥಾಪಕ ರವಿಚಂದ್ರ ಶೆಟ್ಟಿ, ತೋಟಗಾರಿಕಾ ಮಹಾಮಂಡಲ ನಿರ್ದೇಶಕ ಲಕ್ಷ್ಮೀನಾರಾಯಣ ಉಡುಪ, ತೋಟಗಾರಿಕಾ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ, ಸಿಇಒ ಆಲ್ಬಟ್ ð ಡಿಸೋಜ, ಮಹಾಲಿಂಗ ಶರ್ಮ ಮತ್ತಿತರರು ಇದ್ದರು.