ಉತ್ತರ ಕನ್ನಡ ಜಿಲ್ಲೆಯ ಎಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಅರೆಬೈಲ್ ಶಿವರಾಮ್ ಹೆಬ್ಬಾರ್ ಅವರು ಸಪತ್ನಿಕರಾಗಿ ಕುಟುಂಬಸ್ಥರೊಂದಿಗೆ ಅಕ್ಟೋಬರ್ 28 ರಂದು ಕಾಪು ಮಾರಿಯಮ್ಮನ ಸನ್ನಿದಾನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.
ದೇವಳದ ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಶಾಸಕರು ವಿಶೇಷ ಅನ್ನದಾನ ಸೇವೆಯನ್ನು ಮತ್ತು ಮಗಳ ಪರವಾಗಿ ಶಾಶ್ವತ ಅನ್ನದಾನ ಸೇವೆಯನ್ನು ನೀಡಿದರು ಹಾಗೂ ಕುಟುಂಬದ ಸದಸ್ಯರು ಕಾಪುವಿನ ಅಮ್ಮನಿಗೆ ಅಕ್ಷರ ನಮನ ಸಲ್ಲಿಸಲು ನವದುರ್ಗಾ ಲೇಖನ ಪುಸ್ತಕವನ್ನು ಪಡೆದುಕೊಂಡರು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಕಾರ್ಯದರ್ಶಿ ಗೀತಾಂಜಲಿ ಎಂ. ಸುವರ್ಣ, ಪ್ರಚಾರ ಸಮಿತಿಯ ಸಂಚಾಲಕ ಕಾಪು ಜಯರಾಮ ಆಚಾರ್ಯ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

