Thursday, April 24, 2025
HomeUncategorized₹60 ಲಕ್ಷ ವೆಚ್ಚದಲ್ಲಿ ಹೆರ್ಗ ಮಾರುತಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್ ಪಾಲ್...

₹60 ಲಕ್ಷ ವೆಚ್ಚದಲ್ಲಿ ಹೆರ್ಗ ಮಾರುತಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಉಡುಪಿ ನಗರಸಭೆ ವ್ಯಾಪ್ತಿಯ ಶೆಟ್ಟಿಬೆಟ್ಟು ವಾರ್ಡಿನ ಮಾರುತಿ ನಗರ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಮಾರುತಿ ನಗರ ನಾಗರಿಕರ ಬೇಡಿಕೆಯ ಮೇರೆಗೆ ನಗರಸಭೆಯ ವತಿಯಿಂದ ₹60 ಲಕ್ಷ ಅನುದಾನ ಒದಗಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಶೆಟ್ಟಿ ಬೆಟ್ಟು ವಾರ್ಡಿನ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ನಗರಸಭೆ ಮಾಜಿ ಅಧ್ಯಕ್ಷರಾದ ಶ್ರೀ ದಿನಕರ ಶೆಟ್ಟಿ ಹೆರ್ಗ, ನಗರಸಭಾ ಸದಸ್ಯರಾದ ಶ್ರೀಮತಿ ಅಶ್ವಿನಿ ಅರುಣ್, ಶ್ರೀಮತಿ ಸುಮಿತ್ರಾ ನಾಯಕ್, ಶ್ರೀ ಹರೀಶ್ ಶೆಟ್ಟಿ ಅಂಬಲಪಾಡಿ, ಶ್ರೀ ಗಿರಿಧರ ಆಚಾರ್ಯ ಕರಂಬಳ್ಳಿ, ಸ್ಥಳೀಯ ಮುಖಂಡರಾದ ಶ್ರೀ ದುರ್ಗಾದಾಸ್ ರೈ, ಶ್ರೀ ದಿವಾಕರ ಶೆಟ್ಟಿ, ಶ್ರೀ ಅಕ್ಷಿತ್ ಶೆಟ್ಟಿ, ಶ್ರೀ ವಾಸುದೇವ ಶೆಣೈ, ಶ್ರೀ ಕೃಷ್ಣ ಆಚಾರ್ಯ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular