₹20 ಲಕ್ಷ ವೆಚ್ಚದಲ್ಲಿ ನೇಜಾರು ಅಂಗನವಾಡಿ ಕೇಂದ್ರಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಶಿಲಾನ್ಯಾಸ

0
16

ಉಡುಪಿ ವಿಧಾನಸಭಾ ಕ್ಷೇತ್ರದ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇಜಾರು ಕ್ರೀಡಾಂಗಣದ ಬಳಿ ಸುಮಾರು ರೂ. 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕಟ್ಟಡದ ಕಾಮಗಾರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣಕ್ಕೆ ಅಡಿಪಾಯವಾಗಿರುವ ಅಂಗನವಾಡಿ ಕೇಂದ್ರಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ವಿಶೇಷ ಆದ್ಯತೆ ನೀಡಿದ್ದು, ಅಂಗನವಾಡಿ ಕಾಮಗಾರಿ ಶೀಘ್ರ ಪೂರ್ಣಗೊಂಡು ನೇಜಾರು ಪರಿಸರದ ಪುಟಾಣಿಗಳಿಗೆ ನೂತನ ಅಂಗನವಾಡಿ ಮೂಲಕ ಉತ್ತಮ ಶಿಕ್ಷಣ ಹಾಗೂ ಪೌಷ್ಠಿಕ ಆಹಾರದ ಮೂಲಕ ಆರೋಗ್ಯವಂತ ಬೆಳವಣಿಗೆಗೆ ಪೂರಕ ಸೌಲಭ್ಯ ದೊರೆಯುವಂತಾಗಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ್, ಉಪಾಧ್ಯಕ್ಷರಾದ ಪ್ರೇಮಲತಾ, ಮಾಜಿ ಅಧ್ಯಕ್ಷರಾದ ಸತೀಶ್ ನಾಯ್ಕ್, ಕೃಷ್ಣ ದೇವಾಡಿಗ, ಗ್ರಾಮ ಪಂಚಾಯತ್ ಸದಸ್ಯರಾದ ವಿಶು ಕುಮಾರ್, ಉದಯ ಪೂಜಾರಿ, ಪ್ರಶಾಂತ್ ಆಚಾರ್ಯ, ನವೀನ್ ಕಾಂಚನ್, ಕವಿತ ಮೇಸ್ತ, ರತ್ನ, ಅನಿತಾ ನಾಯ್ಕ್, ಜ್ಯೋತಿ ಬೆರೆಟ್ಟೋ, ಬೆನೆಡಿಕ್ಟ ಜೆ. ಮೆನೇಜಸ್, ಪಕ್ಷದ ಪ್ರಮುಖರಾದ ಉಮೇಶ್ ಅಮೀನ್, ಸುಧೀರ್, ಅಂಗನವಾಡಿ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here