ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

0
32

ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರಜಿಡ್ದ ಬಳಿ ನದಿ ಕೊರೆತ ಪ್ರದೇಶಕ್ಕೆ ಅಧಿಕಾರಿಗಳ ಜೊತೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಭಾಗದಲ್ಲಿ ನದಿ ಕೊರೆತ ತೀವ್ರಗೊಂಡ ಪರಿಣಾಮ ಹಲವಾರು ತೆಂಗಿನ ಮರಗಳು ಕೊಚ್ಚಿ ಹೋಗಿದ್ದು, ಕಾಂಕ್ರೀಟ್ ಸಂಪರ್ಕ ರಸ್ತೆ ಕಡಿದು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ತಕ್ಷಣ ತುರ್ತು ಕಾಮಗಾರಿ ನಡೆಸುವಂತೆ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರು.

ನಾಗರಜಿಡ್ಡ ಭಾಗದ ನದಿ ಕೊರೆತ ಸಮಸ್ಯೆ ಇರುವ ಸ್ಥಳಗಳಲ್ಲಿ ಶಾಶ್ವತ ತಡೆಗೋಡೆ ಕಾಮಗಾರಿ ಈಗಾಗಲೇ ಮಂಜೂರಾಗಿದ್ದು ಶೀಘ್ರ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ, ಉಪಾಧ್ಯಕ್ಷರಾದ ಶ್ರೀ ಸತೀಶ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಅವಿನಾಶ್ ಶೆಟ್ಟಿ, ಶ್ರೀ ಮಹೇಶ್ ಕೋಟ್ಯಾನ್, ಶ್ರೀ ರಾಜೇಶ್ ರಾವ್, ಶ್ರೀಮತಿ ನೇತ್ರಾವತಿ, ಶ್ರೀ ಪ್ರಶಾಂತ್ ಮಾಯಾಡಿ, ಗ್ರಾಮ ಲೆಕ್ಕಾಧಿಕಾರಿ ಪ್ರಮೋದ್, , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಅನುಪಮ, ಕರ್ನಾಟಕ ನೀರಾವರಿ ನಿಗಮದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶ್ರೀ ಸುನೀಲ್, ಸಹಾಯಕ ಅಭಿಯಂತರ ಶ್ರೀ ಪ್ರೀತಮ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here