Tuesday, January 14, 2025
Homeಬೆಳಗಾವಿಕೋರ್ಟ್ ಮುಂದೆ ಎಂಎಲ್‌ಸಿ ಸಿಟಿ ರವಿ ಹಾಜರು: ವಿಚಾರಣೆ ಮಧ್ನಾಹ್ನ 3 ಗಂಟೆಗೆ ಮುಂದೂಡಿಕೆ

ಕೋರ್ಟ್ ಮುಂದೆ ಎಂಎಲ್‌ಸಿ ಸಿಟಿ ರವಿ ಹಾಜರು: ವಿಚಾರಣೆ ಮಧ್ನಾಹ್ನ 3 ಗಂಟೆಗೆ ಮುಂದೂಡಿಕೆ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರನ್ನು ಪೊಲೀಸರು ಬೆಳಗಾವಿಯ ಜೆಎಂಎಫ್‌ಸಿ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎಫ್ಐಆರ್ ದಾಖಲಿಸಿದ್ದ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದರು. ಇಂದು ಜೆಎಂಎಫ್‌ಸಿ ಕೋರ್ಟ್ ಮುಂದೆ ಹಾಜರುಪಡಿಸಿದ್ದು ನ್ಯಾಯಮೂರ್ತಿಗಳು ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು.

ರವಿ ಪರ ವಕೀಲ ಎಂಬಿ ಜಿರಲಿ ವಾದ ಮಂಡಿಸಿದರು. ಅಲ್ಲದೆ ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆ. ಇದೀಗ ಜಾಮೀನು ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾಗುವ ವಿಚಾರಣೆ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಪರ ವಕೀಲರು ವಾದ ಮಂಡಿಸಲಿದ್ದಾರೆ. ಆನಂತರ ಜಾಮೀನು ತೀರ್ಪು ನೀಡುವ ಸಾಧ್ಯತೆ ಇದೆ.

ಖಾನಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ ರಾತ್ರಿ ಹೇಳಿಕೆ ದಾಖಲಿಸಿಕೊಂಡು ಇದರ ಚಿತ್ರೀಕರಣ ಮಾಡಲಾಗಿದೆ. ನಾನು ಸಚಿವೆ ವಿರುದ್ಧ ಯಾವುದೇ ರೀತಿಯ ಅಶ್ಲೀಲ ಪದ ಬಳಸಿಲ್ಲ. ಮಹಿಳೆಯರ ಬಗ್ಗೆ ನನಗೆ ಗೌರವಿದೆ. ಯಾರೋ ಹೇಳಿದ ಹೇಳಿಕೆ ಕೇಳಿ ನನ್ನ ಮೇಲೆ ಸಚಿವೆ ಸುಳ್ಳು ದೂರು ದಾಖಲಿಸಿದ್ದಾರೆ. ದೂರಿನಲ್ಲಿರುವ ಅಂಶಗಳು ಸತ್ಯಕ್ಕೆ ದೂರವಾಗಿವೆ ಎಂದು ಸಿಟಿ ರವಿ ಹೇಳಿಕೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular