ಶೀಘ್ರದಲ್ಲೇ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್​: . 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್​ ಬಳಕೆಗೆ ನಿಷೇಧ

0
27

ಮಂಗಳೂರು: ಶೀಘ್ರದಲ್ಲೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್​ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸುಳಿವು ನೀಡಿದ್ದಾರೆ. ಮೊಬೈಲ್ ಬ್ಯಾನ್​ ವಿಚಾರವಾಗಿ ಮುಖ್ಯಮಂತ್ರಿಗಳು ವಿಸಿಗಳಿಂದಲೂ ಅಭಿಪ್ರಾಯ ಕೇಳಿದ್ದು, ಪ್ರಸ್ತಾಪಕ್ಕೆ ವಿಶ್ವವಿದ್ಯಾಲಯದ ಕುಲಪತಿಗಳಿಂದಲೂ ಒಪ್ಪಿಗೆ ಸಿಕ್ಕಿದೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್​ ಬಳಕೆಗೆ ಕಡಿವಾಣ ಹಾಕಬೇಕಿದ್ದು, ಆಸ್ಟ್ರೇಲಿಯಾ ಸೇರಿ ಅನೇಕ ದೇಶಗಳಲ್ಲಿ ಈ ನಿಯಮ ಮಾಡಿದ್ದಾರೆ. ಸೋಷಿಯಲ್​ ಮೀಡಿಯಾಗಳಿಂದ ವಿದ್ಯಾರ್ಥಿಗಳು ಹಾಳಾಗುತ್ತಿರುವ ಆರೋಪ ಹಿನ್ನೆಲೆ ವಿದ್ಯಾರ್ಥಿಗಳ ಮೊಬೈಲ್ ಬಳಕೆ ನಿಷೇಧಕ್ಕೆ ಚಿಂತನೆ ಇದೆ ಎನ್ನಲಾಗಿದೆ.

ಡ್ರಗ್ಸ್​​ ಒಂದು ಪಿಡುಗಾಗಿದ್ದು, ವಿಶ್ವ ವಿದ್ಯಾಲಯಗಳ ಕಾಂಪಸ್​​ಗಳು ಮಾದಕ ವಸ್ತುಗಳಿಂದ ಮುಕ್ತವಾಗಿರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಇದೇ ವೇಳೆ ವಿಸಿಗಳಿಗೆ ಸೂಚಿಸಿದ್ದಾರೆ.

ಸ್ಟೂಡೆಂಟ್ ಎಲೆಕ್ಷನ್ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ವಿದ್ಯಾರ್ಥಿ ಚುನಾವಣೆ ಮಾಡುವ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ. ನಮ್ಮ ಕಾಲದಲ್ಲಿ ಚುನಾವಣೆ ಇತ್ತು, ನಾವು ಅಲ್ಲಿಂದಲೇ ಬಂದಿರುವುದು. ಹೀಗಾಗಿ ಷರತ್ತುಗಳನ್ನು ‌ಹಾಕಿ ಚುನಾವಣೆಗೆ ಅವಕಾಶ ಕೊಡಲು ಚಿಂತನೆ ಇದೆ. ಚುನಾವಣೆ ಆಗದಿದ್ರೆ ವಿದ್ಯಾರ್ಥಿಗಳು ನಾಯಕರಾಗಿ ಹೇಗೆ ಬೆಳೆಯೋದು? ಭಾರತದಲ್ಲಿ ವಿದ್ಯಾರ್ಥಿ ನಾಯಕರು ಇಲ್ಲವೇ ಇಲ್ಲ ಎಂದ ಸಿಎಂ, ಈ ಬಗ್ಗೆ ಸಲಹೆ ಕೊಡುವಂತೆ ವಿಸಿಗಳಿಗೆ ಸೂಚಿಸಿದ್ದಾರೆ.

ಆದರೆ ಕಾಲೇಜುಗಳಲ್ಲಿ ಚುನಾವಣೆ ನಡೆಸಲು ಬಹುತೇಕ ವಿಸಿಗಳಿಂದ ವಿರೋಧ ವ್ಯಕ್ತವಾಗಿದೆ. ಯಾವುದೇ ಕಾರಣಕ್ಕೂ ಕಾಲೇಜುಗಳಲ್ಲಿ ಚುನಾವಣೆ ಬೇಡ ಎಂದ ವಿಸಿಗಳು, JNU ಸೇರಿ ಹಲವೆಡೆ ಗಲಾಟೆ ಆಗ್ತಿದೆ. ಈಗ ಪಕ್ಷಾತೀತವಾಗಿ ಚುನಾವಣೆಗಳು ನಡೆಯುವುದು ಕಷ್ಟ. ಚುನಾವಣೆಯಾದ್ರೆ ಕ್ಯಾಂಪೇನ್​​ಗೆ ಬಹಳ ಸಮಯ ಬೇಕಿರುವ ಕಾರಣ ಸ್ಟೂಡೆಂಟ್​ ಎಲೆಕ್ಷನ್​ ಬೇಡ ಎಂದು ಬಹುತೇಕ ಕುಲಪತಿಗಳು ಸಿಎಂಗೆ ತಿಳಿಸಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here