Monday, July 15, 2024
HomeUncategorizedರಾಜ್ಯದ ಶಾಲಾ ಕಾಲೇಜುಗಳಲ್ಲಿ ಮೊಬೈಲ್‌ ಬಳಕೆ ನಿಷೇಧ | ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಮೊಬೈಲ್‌ ಬಳಕೆ ನಿಷೇಧ | ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್‌ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಶಾಲಾ ಅವಧಿಯಲ್ಲಿ ಮೊಬೈಲ್‌ ಬಳಕೆ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಮಹತ್ವದ ಪರಿಣಾಮ ಬೀರುತ್ತಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳು ತರಗತಿಗಳಲ್ಲಿ ಮೊಬೈಲ್‌ ಬಳಸಿ ಸಂಗೀತ ಕೇಳುವುದು ಆಟ ಆಡುವುದು ಹಾಗೂ ಎಸ್‌ಎಂಎಸ್‌ ಕಳುಹಿಸುವುದು ಮಾಡುತ್ತಿರುತ್ತಾರೆ. ಇದರಿಂದ ತರಗತಿಗಳಲ್ಲಿ ಅಹಿತಕರ ವಾತಾವರಣವೂ ಸೃಷ್ಟಿಯಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತದೆ. ಈ ಬಗ್ಗೆ ಅನೇಕ ಪೋಷಕರು ದೂರುತ್ತಿದ್ದಾರೆ. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯವಾಗುತ್ತದೆ. ಇದರೊಂದಿಗೆ ಶಾಲಾ ಅವಧಿಯಲ್ಲಿ ಶಾಲಾ ಕಾಲೇಜುಗಳ ಆವರಣದಲ್ಲಿ ಶಿಕ್ಷಕರು, ಉಪನ್ಯಾಸಕರು ಹಾಗೂ ಯಾವುದೇ ಸಿಬ್ಬಂದಿ ಮೊಬೈಲ್‌ ಬಳಸುವುದನ್ನೂ ನಿಷೇಧಿಸಲಾಗಿದೆ. ನಿಷೇಧವನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು ಶಿಕ್ಷಕರು-ಉಪಾನ್ಯಾಸಕರು, ಸಿಬ್ಬಂದಿ ಶಾಲಾವಧಿಯಲ್ಲಿ, ಶಾಲಾ ಆವರಣದಲ್ಲಿ ಮೊಬೈಲ್‌ ಬಳಸಿದಲ್ಲಿ ಅಂತಹ ಮೊಬೈಲ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳತಕ್ಕದ್ದು. ಈ ನಿಷೇಧವನ್ನು ಅನುಷ್ಠಾನಗೊಳಿಸಲು ಅನಷ್ಠಾನ ಸಮಿತಿ ರಚಿಸಿ, ಅವುಗಳ ಜವಾಬ್ದಾರಿ, ಅಧಿಕಾರ ವ್ಯಾಪ್ತಿ ನಿಗದಿಪಡಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ.

RELATED ARTICLES
- Advertisment -
Google search engine

Most Popular