Tuesday, June 18, 2024
Homeರಾಜಕೀಯಕಾರ್ಕಳ ಮಂಡಲ ಬಿಜೆಪಿಯಿಂದ ಮೋದಿ ಸರ್ಕಾರ 3.0 ಸಂಭ್ರಮಾಚರಣೆ

ಕಾರ್ಕಳ ಮಂಡಲ ಬಿಜೆಪಿಯಿಂದ ಮೋದಿ ಸರ್ಕಾರ 3.0 ಸಂಭ್ರಮಾಚರಣೆ

ನರೇಂದ್ರ ಮೋದಿಯವರು ಮೂರನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭ
ಕಾರ್ಕಳ ಮಂಡಲ ಬಿಜೆಪಿ ವತಿಯಿಂದ ಶಾಸಕರ ಜನಸೇವಾ ಕಚೇರಿ ʻವಿಕಾಸʻದಲ್ಲಿ, ಹಾಗೂ ಕಾರ್ಕಳದ ವಿವಿಧ ಭಾಗಗಳಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ನರೇಂದ್ರ ಮೋದಿಯವರ ಪ್ರಮಾಣವಚನ ಕಾರ್ಯಕ್ರಮದ ನೇರಪ್ರಸಾರವನ್ನು ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಕಾರ್ಕಳ ಮಂಡಲ ಅಧ್ಯಕ್ಷರಾದ ನವೀನ್ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ
ಉದಯ್ ಕೋಟ್ಯಾನ್, ಜಿಲ್ಲಾ ವಕ್ತಾರರಾದ ಸತೀಶ್ ಶೆಟ್ಟಿ ಮುಟ್ಲುಪಾಡಿ, ಕಾರ್ಕಳ ಬಿಜೆಪಿ ಯುವ ಮೋರ್ಚಾ
ಅಧ್ಯಕ್ಷರಾದ ರಾಕೇಶ್ ಶೆಟ್ಟಿ ಕುಕ್ಕುಂದೂರು, ಪುರಸಭಾ ಸದಸ್ಯರು, ನಗರಾಧ್ಯಕ್ಷರಾದ ನಿರಂಜನ್ ಜೈನ್, ಕಾರ್ಕಳ
ಮಂಡಲ ವಕ್ತಾರರಾದ ರವೀಂದ್ರ ಮೊಯ್ಲಿ ಹಾಗೂ ಪಕ್ಷದ ಪ್ರಮುಖರು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular