ನವದೆಹಲಿ: ಎನ್‌ಡಿಎ ಒಕ್ಕೂಟದ ಸಂಸದೀಯ ಸಭೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ಅವರ ಆಯ್ಕೆ ಮಾಡುವ ಕುರಿತ ರಾಜನಾಥ ಸಿಂಗ್ ಪ್ರಸ್ತಾವನೆಗೆ ಜೆಡಿಎಸ್ ಸಂಸದ ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ಇತರ ಎನ್‌ಡಿಎ ನಾಯಕರು ಅನುಮೋದಿಸಿದರು. ನರೇಂದ್ರ ಮೋದಿ ಅವರು ಸಭೆಗೆ ಆಗಮಿಸುತ್ತಿದ್ದಂತೆ ಎನ್‌ಡಿಎ ನಾಯಕರು ಅವರನ್ನು ಸ್ವಾಗತಿಸಿದರು. ಸಭಾಂಗಣಕ್ಕೆ ಆಗಮಿಸುತ್ತಿದ್ದಂತೆ ಮೋದಿ ಅವರು ಆರಂಭದಲ್ಲಿ ಸಂವಿಧಾನಕ್ಕೆ ನಮಸ್ಕರಿಸಿದರು.
ವೇದಿಕೆಯಲ್ಲಿ ಮೋದಿ ಅವರ ಪಕ್ಕದಲ್ಲಿ ಆಂಧ್ರಪ್ರದೇಶ ಮಾಜಿ ಸಿಎಂ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ದು, ಬಿಹಾರ ಸಿಎಂ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಸೇರಿದಂತೆ ಮಿತ್ರ ಪಕ್ಷಗಳ ನಾಯಕರು ವೇದಿಕೆ ಸ್ವೀಕರಿಸಿದರು. ವೇದಿಕೆಯಲ್ಲಿ ಅನುಪ್ರಿಯಾ ಪಟೇಲ್, ಜಿತನ್ ರಾಮ್ ಮಾಂಝಿ, ಚಿರಾಗ್ ಪಾಸ್ವಾನ್, ಏಕನಾಥ್ ಶಿಂಧೆ, ಅಜಿತ್ ಪವಾರ್, ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು, ಎಚ್.ಡಿ. ಕುಮಾರಸ್ವಾಮಿ, ಪವನ್ ಕಲ್ಯಾಣ್, ಅಮಿತ್ ಶಾ, ಜೆಪಿ ನಡ್ಡಾ, ರಾಜನಾಥ್ ಸಿಂಗ್ ಇದ್ದರು.