Sunday, July 14, 2024
Homeರಾಜಕೀಯಅಡ್ವಾಣಿ, ಜೋಶಿ ಆಶೀರ್ವಾದ ಪಡೆದ ನರೇಂದ್ರ ಮೋದಿ

ಅಡ್ವಾಣಿ, ಜೋಶಿ ಆಶೀರ್ವಾದ ಪಡೆದ ನರೇಂದ್ರ ಮೋದಿ

ನವದೆಹಲಿ: ಸತತ ಮೂರನೇ ಬಾರಿ ಸರ್ಕಾರ ರಚಿಸಲು ಹಕ್ಕು ಮಂಡಿಸುವ ಮುನ್ನ ಹಂಗಾಮಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ಹಿರಿಯ ನಾಯಕರುಗಳಾದ ಎಲ್‌.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಎನ್‌ಡಿಎ ಸಂಸದೀಯ ಸಭೆಯಲ್ಲಿ ಸಂಸದೀಯ ನಾಯಕರಾಗಿ ಆಯ್ಕೆಯಾದ ಬಳಿಕ ಶುಕ್ರವಾರ ಅಡ್ವಾಣಿ ಮತ್ತು ಜೋಶಿ ಅವರ ನಿವಾಸಕ್ಕೆ ತೆರಳಿ ಹೂಗುಚ್ಚ ನೀಡಿ ಅವರು ಮಾತುಕತೆ ನಡೆಸಿದರು. ಈ ನಡುವೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಮೋದಿ ಹಕ್ಕು ಮಂಡಿಸಲಿದ್ದಾರೆ.

RELATED ARTICLES
- Advertisment -
Google search engine

Most Popular