ಮೊಗ್ರು : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬುಳೇರಿ ಮೊಗ್ರು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

0
8

ಮೊಗ್ರು : ದ. ಕ.ಜಿ.ಪo. ಹಿರಿಯ ಪ್ರಾಥಮಿಕ ಶಾಲೆಯ ಬುಳೇರಿ ಮೊಗ್ರು ಇಲ್ಲಿನ 2025-26 ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜ. 26 ರಂದು ನೆರವೇರಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪದ್ಮನಾಭ ಬಿ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಇವರು ಕಾರ್ಯಕ್ರಮ ಹಾಗೂ ವಾಚನಾಲಾಯದ ಉದ್ಘಾಟನೆ ನೇರವೇರಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಬಂದಾರು ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ಗೌಡ ಸುದೆಪ್ಪಿಲ, ಶಿವ ಗೌಡ ಹೇವ, ಗಂಗಾಧರ ಪೂಜಾರಿ ದoಬೆತ್ತಿಮಾರು, ಬಾಲಕೃಷ್ಣ ಗೌಡ ಮುಗೇರಡ್ಕ, ಹಾಗೂ ಉದ್ಯಮಿಗಳಾದ ಜಯಪ್ರಸಾದ್ ಗೌಡ ಕಡಮ್ಮಾಜೆ ಫಾರ್ಮ್ಸ್, ಶಾಲಾ ಮುಖ್ಯೋಪಾದ್ಯಾಯರಾದ ಕರುಣಾಕರ, ಕುಪೆಟ್ಟಿ ಸಿ.ಆರ್. ಪಿ ಯವರಾದ ವಾರಿಜ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅತಿಥಿ ಶಿಕ್ಷಕಿ ಅಖಿಲಾಶ್ರೀ ಸ್ವಾಗತಿಸಿ, ಸಹ ಶಿಕ್ಷಕಿ ಆಶಾ ಕಾರ್ಯಕ್ರಮ ನಿರೂಪಿಸಿ, ಮಮತಶ್ರೀ ಧನ್ಯವಾದವಿತ್ತರು,ಮುಖ್ಯ ಶಿಕ್ಷಕರಾದ ಕೃಷ್ಣಮೂರ್ತಿ ಪ್ರಾಸ್ತವಿಕ ನುಡಿಗಳನ್ನಾಡಿದರು, ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

LEAVE A REPLY

Please enter your comment!
Please enter your name here