ಮೂಡುಬಿದಿರೆ: ನೆಲ್ಲಿಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಂಟ್ರಾಡಿ ಕೊಂಬೆಟ್ಟುವಿನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಯುವಕನೊಬ್ಬ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಒಂಬೆಟ್ಟು ನಿವಾಸಿ ರಾಜೇಶ್ ಮೃತ ದುರ್ದೈವಿ.
ಈ ದುರ್ಘಟನೆಯು ಮಂಗಳವಾರ ಬೆಳಗ್ಗೆ ನಡೆದಿದೆ. ರಾಜೇಶ್ ಅವರು ಟ್ರಾಕ್ಟರ್ ತೊಳೆಯಲ್ಲೆಂದು ಚಲಾಯಿಸುತ್ತಿದ್ದಾಗ, ಅದು ರಿವರ್ಸ್ ಹೋಗಿ ಬಾವಿಯ ಕಡೆಗೆ ಚಲಿಸಲಾರಂಭಿಸಿತು. ಟ್ಟ್ರಾಕ್ಟರ್ ಬಾವಿಗೆ ಡಿಕ್ಕಿ ಹೊಡೆದು ಬಾವಿಗೆ ಬಿದ್ದಿದೆ, ಅದರಲ್ಲಿದ್ದ ರಾಜೇಶ್ ಪ್ರಾಣ ಕಳೆದುಕೊಂಡಿದ್ದಾರೆ.
ರಾಜೇಶ್ ಅವರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಈ ಅಕಾಲಿಕ ಸಾವಿಗೆ ಸ್ಥಳೀಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.