ಮೂಡುಬಿದಿರೆ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ಮತ್ತು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳು ಮೂಡುಬಿದಿರೆ ಇದರ ಸಂಯುಕ್ತ ಆಶ್ರಯದಲ್ಲಿ ಎಕ್ಸಲೆಂಟ್ ಶಾಲಾ ಆವರಣದಲ್ಲಿ ನಡೆದ ಮೂಡುಬಿದಿರೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯನ್ನು ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಣೇಶ್ ವೈ, ರಶ್ಮಿತಾ ಯುವರಾಜ್ ಜೈನ್, ದೈಹಿಕ ಶಿಕ್ಷಣಾಧಿಕಾರಿಯಾದ ನಿತ್ಯಾನಂದ ಶೆಟ್ಟಿ, ಶಿಕ್ಷಕರುಗಳಾದ ರಾಜಶ್ರೀ, ನಾಗೇಶ್, ರಾಮಕೃಷ್ಣ ಶಿರೂರು, ಸುನಿಲ್ ಮಿರಂದ, ಶೋಭಾ, ಸೌಮ್ಯ, ಸುಜಾತ, ನಿರ್ಮಲ, ಪ್ರಸನ್ನ ಶೆಣೈ, ಮಹೇಶ್ವರಿ, ಶಶಿಕಾಂತ್ ವೈ, ನಿತೇಶ್ ಬಲ್ಲಾಳ್, ರಾಜೇಶ್, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಮೊದಲಾದವರು ಉಪಸ್ಥಿತರಿದ್ದರು.