ಮೂಡುಬಿದಿರೆ: ಸ್ವಂತ ಉದ್ಯಮ ಸ್ಥಾಪಿಸುವ ಕನಸು ಹೊತ್ತ ಯುವಕ ನೇಣಿಗೆ ಶರಣು

0
203

ಮೂಡುಬಿದಿರೆ: ಸ್ವಂತ ಉದ್ಯಮ ಸ್ಥಾಪಿಸುವ ಕನಸು ಹೊತ್ತುಕೊಂಡಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗರಕಟ್ಟೆಯಲ್ಲಿ ನಡೆದಿದೆ. ಹಲವು ವರ್ಷಗಳ ಕಾಲ ದುಬೈನಲ್ಲಿ ಉದ್ಯೋಗದಲ್ಲಿದ್ದ ದೀಕ್ಷಿತ್, ಒಂದೂವರೆ ವರ್ಷದ ಹಿಂದೆ ತವರಿಗೆ ಮರಳಿದ್ದರು.

ನಾಗರಕಟ್ಟೆ-ಒಂಟಿಕಟ್ಟೆ ಕ್ರಾಸ್ ಬಳಿ ಕಬ್ಬಿನ ಜ್ಯೂಸ್ ವ್ಯಾಪಾರ ಮಾಡುತ್ತಿರುವ ಶ್ರೀನಿವಾಸ್ ಎಂಬುವವರ ಪುತ್ರ ದೀಕ್ಷಿತ್ (35) ಮೃತಪಟ್ಟ ಯುವಕ. ಹ

ಮೂಡುಬಿದಿರೆಯ ರಿಂಗ್‌ರೋಡ್ ಬಳಿ ಹೋಟೆಲ್ ಉದ್ಯಮ ಪ್ರಾರಂಭಿಸಬೇಕೆಂಬ ಕನಸು ಹೊತ್ತಿದ್ದ ದೀಕ್ಷಿತ್‌ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು. ಆದರೆ ಶನಿವಾರ ಮಧ್ಯಾಹ್ನ, ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮಲಗಿದ್ದ ಸಮಯದಲ್ಲಿ, ಮನೆಯ ಕೋಣೆಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉತ್ತಮ ಭವಿಷ್ಯದ ಕನಸು ಕಂಡಿದ್ದ ಯುವಕನ ಈ ಅಂತ್ಯವು ಕುಟುಂಬಸ್ಥರಲ್ಲಿ ಮತ್ತು ಸ್ನೇಹಿತರಲ್ಲಿ ಭಾರೀ ಶೋಕವನ್ನುಂಟು ಮಾಡಿದೆ. ದೀಕ್ಷಿತ್ ಅವರ ಈ ತೀವ್ರ ನಿರ್ಧಾರಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

LEAVE A REPLY

Please enter your comment!
Please enter your name here