ಮೂಡುಬಿದಿರೆ : ಯುವತಿಯೋರ್ವಳು ಗುರುಪುರ ನದಿಗೆ ಹಾರಿ ಆತ್ಮಹತ್ಯೆ

0
216

ಮೂಡುಬಿದಿರೆ ಅಲಂಕಾರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮೂಡುಬಿದಿರೆಯ ಯುವತಿಯೋರ್ವಳು ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೂಡುಬಿದಿರೆ ಗಾಂಧಿನಗರ ಸಮೀಪದ ನವ್ಯ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡವಳು.

ಈಕೆ ಮೂಡುಬಿದಿರೆಯ ಅಲಂಕಾ‌ರ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಳು . ಗುರುಪುರದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರಿಗೆ ಈ ಘಟನೆ ಬಗ್ಗೆ ಗೊತ್ತಾಗಿ ಕೂಡಲೇ ತಮ್ಮ ಬೆಂಬಲಿಗರೊಂದಿಗೆ ಶವ ಮೇಲಕ್ಕೆತ್ತಲು ಬೇಕಾದ ವ್ಯವಸ್ಥೆ ಮಾಡುತ್ತಿದ್ದಾರೆ. ನವ್ಯಳ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ನವ್ಯಳೊಂದಿಗೆ ನಿಡೋಡಿ ಮೂಲದ ಮತ್ತೋರ್ವಳು ಯುವತಿ ಕೂಡಾ ಇದ್ದಳೆನ್ನಲಾಗಿದ್ದು , ಈ ಘಟನೆಗೆ ಕಾರಣವೇನೆಂದು ಇನ್ನಷ್ಟೇ ತಿಳಿದು ಬರಬೇಕಿದೆ. ಬಜೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here