ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಆಳ್ವಾಸ್ ಕಾಲೇಜು (ಸ್ವಾಯತ್ತ) ಮೂಡುಬಿದಿರೆ ಇಲ್ಲಿನ ತುಳು ಸಂಸ್ಕ್ರತಿ ಅಧ್ಯಯನ ಕೇಂದ್ರದ ವತಿಯಿಂದ ಒಂದು ದಿನದ ಬರವಣಿಗೆ ಕಮ್ಮಟ ಆ. 30 ರಂದು ಕಾಲೇಜಿನ ಎ.ವಿ. ಸಭಾಂಗಣದಲ್ಲಿ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಕಾರ‍್ಯಕ್ರಮದ ಉದ್ಘಾಟನೆ ನೇರವೇರಿಸುವರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ ಆಳ್ವ ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸುವರು. ಸಂಪನ್ಮೂಲ ವ್ಯಕ್ತಿಯಾಗಿ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ನಿವೃತ್ತ ಉಪನ್ಯಾಸಕ ಹಾಗೂ ತುಳು ಜಾನಪದ ವಿದ್ವಾಂಸ ಡಾ. ವಿಶ್ವನಾಥ ಬದಿಕಾನ ಭಾಗವಹಿಸುವರು. ಆಳ್ವಾಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಕುರಿಯನ್ , ಆಳ್ವಾಸ್ ತುಳು ಸಂಸ್ಕ್ರತಿ ಅಧ್ಯಯನ ಕೇಂದ್ರ ಡಾ. ಯೋಗೀಶ್ ಕೈರೋಡಿ ಕಾರ‍್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.